2026-03-07 07:13:46

SSLC student murder case | SSLC ವಿದ್ಯಾರ್ಥಿ ಹತ್ಯೆ ಕೇಸ್ ಇಬ್ಬರು ಅಪ್ರಾಪ್ತರು ಪೊಲೀಸ್ ವಶಕ್ಕೆ | Speed News Kannada

SSLC student murder case | SSLC ವಿದ್ಯಾರ್ಥಿ ಹತ್ಯೆ ಕೇಸ್ ಇಬ್ಬರು ಅಪ್ರಾಪ್ತರು ಪೊಲೀಸ್ ವಶಕ್ಕೆ | Speed News Kannada

ಶಿವಮೊಗ್ಗ : ಶಿವಮೊಗ್ಗದಲ್ಲಿ SSLC ಸೂಡೆಂಟ್ ಒಬ್ಬನನ್ನು ವಿದ್ಯಾರ್ಥಿಗಳೇ ಬರ್ಬರವಾಗಿ ಹತ್ಯೆ ಮಾಡಿರೋ ಕೇಸ್ ನಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆ ಹೋಗುತ್ತಿದ್ದ ವಿದ್ಯಾರ್ಥಿಯನ್ನು ಅದೇ ಬಡಾವಣೆಯ 9ನೇ ತರಗತಿ ಫೇಲ್ ಆಗಿರುವ ಬಾಲಕರು ಹಲ್ಲೆ ಮಾಡಿ ಕೊಲೆ ಮಾಡಿದ್ದರು . ತುಂಗಾ ನಗರ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದರು. ಇದೀಗ ಹಲ್ಲೆ ಮಾಡಿ ಕೊಲೆಗೆ ಕಾರಣವಾದ ಇಬ್ಬರು ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ
ಸೂಳೆಬೈಲು ಬಡಾವಣೆಯ ಸಂಕೇತ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಯತ್ತ ಹೋಗುವಾಗ ಸ್ನೇಹಿತ ಗಿರೀಶ್ ಮೇಲೆ ಅದೇ ಬಡಾವಣೆಯ ಐವರು ಬಾಲಕರು ಏಕಾಏಕಿ ಹಲ್ಲೆ ಮಾಡುತ್ತಿದ್ದದ್ದನ್ನು ಗಮನಿಸಿದ್ದಾನೆ. ಈ ನಡುವೆ ಗಿರೀಶ್‌ನನ್ನು ಬಚಾವ್‌ ಮಾಡಲು ಅಲ್ಲಿಗೆ ಸಂಕೇತ್ ಹೋಗಿದ್ದಾನೆ.ಐವರು ಬಾಲಕರು ಸಂಕೇತ್ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಸಂಕೇತ್ ಅಲ್ಲಿಯೇ ಕುಸಿದು ಬಿದ್ದಿದ್ದಾನೆ.
ಗಿರೀಶ್ ತನ್ನ ಮನೆಯವರಿಗೆ ಮತ್ತು ಅಕ್ಕಪಕ್ಕದವರಿಗೆ ಗಲಾಟೆ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ. ನೆರೆಹೊರೆಯವರು ಅಲ್ಲಿಗೆ ಹೋಗಿ ನೋಡಿದಾಗ ಹಲ್ಲೆಗೊಳಗಾದ ಸಂಕೇತ್ ಸ್ಥಿತಿ ಗಂಭೀರವಾಗಿತ್ತು. ಖಾಸಗಿ ಆಸ್ಪತ್ರೆಗೆ ಕೆರೆದುಕೊಂಡು ಹೋಗುವ ಮಾರ್ಗ ಮಧ್ಯೆಯೇ ಆತನ ಪ್ರಾಣಪಕ್ಷಿ ಹಾರಿಹೋಗಿದೆ .
ಅನ್ಯಕೋಮಿನ ಬಾಲಕರು ಮೊದಲು ಗಿರೀಶ್ ಹಾಗೂ ನಂತರ ಸಂಕೇತ್ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಸಂಕೇತ್ ಕುಸಿದು ಬೀಳುತ್ತಿದ್ದಂತೆಯೇ ಮೂವರು ಬಾಲಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಮನೆ ಮಗನನ್ನು ಕಳೆದುಕೊಂಡು ಪೋಷಕರು ಕಂಗಾಲಾಗಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.