2026-07-23 08:16:36

SSLC Third Language Hindi Exam Sudden Postponement | ಎಸ್ಎಸ್ಎಲ್ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ | Speed news kannada

SSLC Third Language Hindi Exam Sudden Postponement | ಎಸ್ಎಸ್ಎಲ್ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ | Speed news kannada

ಕರ್ನಾಟಕದಾದ್ಯಂತ ಮಾರ್ಚ್​ 18ರಿಂದ ಎಸ್​​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಿವೆ. ಈಗಾಗಲೇ ಕೆಲ ಪರೀಕ್ಷೆಗಳು ಕೂಡ ನಡೆದಿವೆ. ಆದರೆ ಮಾ.30ರಂದು ನಡೆಯಬೇಕಿದ್ದ ಹಿಂದಿ ಪರೀಕ್ಷೆಯನ್ನು ಇದೀಗ ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದ್ದು, ಮಾ. 31ರಂದು ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಸರ್ಕಾರದ ಅಧಿಸೂಚನೆಯಂತೆ ಮಾರ್ಚ್​ 26ರನ್ವಯ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾರ್ಚ್​ 31ರಂದು ಅಂದರೆ ಮಂಗಳವಾರ ಬದಲಾಗಿ ಮಾರ್ಚ್​ 30ರ ಸೋಮವಾರ ಎಂದು ಮಾರ್ಪಡಿಸಿ ಆದೇಶಿಸಲಾಗಿತ್ತು. ಈ ಸಂಬಂಧ ಮಾರ್ಚ್​ 30ರಂದು ನಿಗದಿಪಡಿಸಲಾಗಿದ್ದ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಮಾರ್ಚ್​ 31ರಂದು ಮಂಗಳವಾರ ಈಗಾಗಲೇ ನಿಗದಿಪಡಿಸಿರುವ ಅವಧಿಯಲ್ಲಿ ನಡೆಸಲಾಗುವುದು. ಉಳಿದ ವಿಷಯದ ಪರೀಕ್ಷೆಗಳು ವೇಳಾಪಟ್ಟಿಯಂತೆ ಯಥಾವತ್ತಾಗಿ ನಡೆಯುವುದಾಗಿದೆ ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.