ಕರ್ನಾಟಕದಾದ್ಯಂತ ಮಾರ್ಚ್ 18ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿವೆ. ಈಗಾಗಲೇ ಕೆಲ ಪರೀಕ್ಷೆಗಳು ಕೂಡ ನಡೆದಿವೆ. ಆದರೆ ಮಾ.30ರಂದು ನಡೆಯಬೇಕಿದ್ದ ಹಿಂದಿ ಪರೀಕ್ಷೆಯನ್ನು ಇದೀಗ ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದ್ದು, ಮಾ. 31ರಂದು ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಸರ್ಕಾರದ ಅಧಿಸೂಚನೆಯಂತೆ ಮಾರ್ಚ್ 26ರನ್ವಯ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾರ್ಚ್ 31ರಂದು ಅಂದರೆ ಮಂಗಳವಾರ ಬದಲಾಗಿ ಮಾರ್ಚ್ 30ರ ಸೋಮವಾರ ಎಂದು ಮಾರ್ಪಡಿಸಿ ಆದೇಶಿಸಲಾಗಿತ್ತು. ಈ ಸಂಬಂಧ ಮಾರ್ಚ್ 30ರಂದು ನಿಗದಿಪಡಿಸಲಾಗಿದ್ದ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಮಾರ್ಚ್ 31ರಂದು ಮಂಗಳವಾರ ಈಗಾಗಲೇ ನಿಗದಿಪಡಿಸಿರುವ ಅವಧಿಯಲ್ಲಿ ನಡೆಸಲಾಗುವುದು. ಉಳಿದ ವಿಷಯದ ಪರೀಕ್ಷೆಗಳು ವೇಳಾಪಟ್ಟಿಯಂತೆ ಯಥಾವತ್ತಾಗಿ ನಡೆಯುವುದಾಗಿದೆ ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ.