2026-07-23 09:12:59

Staff removed janivara from students who had come to write the CET | ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ | Speed news kannada

Staff removed janivara from students who had come to write the CET  | ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ | Speed news kannada

ಕರ್ನಾಟಕದಾದ್ಯಂತ ಸಿಇಟಿ ಪರೀಕ್ಷೆಯು ಇಂದಿನಿಂದ ಆರಂಭವಾಗಿದ್ದು, ಮೊದಲ ದಿನವೇ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗ ಧಕ್ಕೆ ತಂದಿರುವ ಆರೋಪ ವ್ಯಕ್ತವಾಗಿದೆ. ಬೆಂಗಳೂರಿನ ಮಡಿವಾಳ ಸಮೀಪದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರೊಂದಿಗೆ, ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ ಮುನ್ನೆಲೆಗೆ ಬಂದಂತಾಗಿದೆ. ಗುರುವಾರ (ಏಪ್ರಿಲ್ 23) ನಡೆದ ಪರೀಕ್ಷೆ ವೇಳೆ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ಅಡ್ಡಗಟ್ಟಿದ ಸಿಬ್ಬಂದಿ, ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ ಎಂಬ ಆರೋಪವಿದೆ. ಇದಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದಾಗ, ‘ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ’ ಎಂದು ಧಮಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕಳೆದ ವರ್ಷವೂ (2025) ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ವಿವಾದಕ್ಕೀಡಾಗಿತ್ತು. ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜು ಮತ್ತು ಬೀದರ್‌ನ ಪರೀಕ್ಷಾ ಕೇಂದ್ರಗಳಲ್ಲಿ ಇದೇ ರೀತಿಯ ಘಟನೆಗಳು ನಡೆದು ಭಾರಿ ಸುದ್ದಿಯಾಗಿದ್ದವು. ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿ ಕಸದ ಬುಟ್ಟಿಗೆ ಹಾಕಲಾಗಿತ್ತು, ಬೀದರ್‌ನಲ್ಲಿ ಜನಿವಾರ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿತ್ತು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.