ಹುಬ್ಬಳ್ಳಿ: ಟೆಲಿಫೋನ್ ಕದ್ದಾಲಿಕೆ ಆರೋಪ ಗಂಭೀರವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಪಡಿಸಿದ್ದಾರೆ.
ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರೂ ಸಹ ಫೋನ್ ಕದ್ದಾಲಿಕೆ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಗುಪ್ತ ಮಾಹಿತಿ ಕಲೆ ಹಾಕುತ್ತಿದ್ದಾರೆ. ಯಾವ ಕಾರಣಕ್ಕೆ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ? ಎಂಬುದನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ ಜೋಶಿ, ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಇದ್ದಾಗಲೂ ಫೋನ್ ಕದ್ದಾಲಿಕೆ ನಡೆದಿತ್ತು ಎನ್ನುವ ಇವರು ಆಗ ಸಮ್ಮಿಶ್ರ ಸರ್ಕಾರದ ಭಾಗವಾಗಿದ್ದರು. ತದನಂತರ ತಮ್ಮ ಸರ್ಕಾರವೇ ಅಧಿಕಾರಕ್ಕೆ ಬಂದರೂ ಏಕೆ ಸುಮ್ಮನಿದ್ದರು? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಆಡಳಿತದಲ್ಲಿ ಆಗಿನ ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಸುವುದನ್ನು ಬಿಟ್ಟು ಸಿಎಂ ಸಿದ್ದರಾಮಯ್ಯ ಅವರೇನು ಆಗ ಕತ್ತೆ ಕಾಯುತ್ತಿದ್ದರೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.