ಬೆಂಗಳೂರು, ಮಾ.9- ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಐವಿಎಫ್ ಚಿಕಿತ್ಸೆ ನೀಡಲು ಯೋಜನೆ ರೂಪಿಸಲಾಗಿದೆ.ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಐವಿಎಫ್ ಚಿಕಿತ್ಸೆ ನೀಡುವಂತಹ ಯೋಜನೆ ರೂಪಿಸಲಾಗಿದ್ದು, ನಗರದಲ್ಲಿರುವ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಐವಿಎಫ್ ಕೇಂದ್ರವನ್ನು ಶೀಘ್ರದಲ್ಲೇ ಆರಂಭಿಸಲಾಗುತ್ತಿದೆ.
ಆಧುನಿಕ ಜೀವನ ಶೈಲಿ, ಒತ್ತಡ ಹಾಗೂ ಆರೋಗ್ಯ ಸಮಸ್ಯೆಗಳ ಕಾರಣದಿಂದ ದಂಪತಿಗಳಲ್ಲಿ ಬಂಜೆತನದ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅನೇಕರು ಐವಿಎಫ್ ಚಿಕಿತ್ಸೆಯತ್ತ ಮುಖ ಮಾಡುತ್ತಿದ್ದಾರೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಈ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತಿರುವುದರಿಂದ ಸಾಮಾನ್ಯ ವರ್ಗದ ದಂಪತಿಗಳಿಗೆ ಚಿಕಿತ್ಸೆ ಪಡೆಯುವುದು ಕಷ್ಟವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ದಂಪತಿಗಳಿಗೆ ನೆರವಾಗುವ ಉದ್ದೇಶದಿಂದ ಸರ್ಕಾರ ಐವಿಎಫ್ ಚಿಕಿತ್ಸೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪರಿಚಯಿಸಲು ನಿರ್ಧರಿಸಿದೆ. ವಾಣಿ ವಿಲಾಸ ಸರ್ಕಾರಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಐವಿಎಫ್ ಕೇಂದ್ರವನ್ನು ಆರಂಭಿಸುವ ಯೋಜನೆ ರೂಪಿಸಲಾಗಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಲಕ್ಷಾಂತರ ರೂಪಾಯಿ ವೆಚ್ಚವಾಗುವ ಈ ಚಿಕಿತ್ಸೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಕಡಿಮೆ ವೆಚ್ಚದಲ್ಲಿ ಅಥವಾ ಉಚಿತವಾಗಿ ಒದಗಿಸುವ ಮೂಲಕ ಸಂತಾನಲಾಭಕ್ಕಾಗಿ ಪರದಾಡುತ್ತಿರುವ ಅನೇಕ ದಂಪತಿಗಳಿಗೆ ಇದು ದೊಡ್ಡ ನೆರವಾಗಲಿದೆ ಎಂದು ವಾಣಿ ವಿಲಾಸ ಅಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಈ ಯೋಜನೆ ಮಹಿಳಾ ಆರೋಗ್ಯ ಮತ್ತು ಸಂತಾನೋತ್ಪತ್ತಿ ಚಿಕಿತ್ಸೆಯಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಐವಿಎಫ್ ಕೇಂದ್ರಗಳನ್ನು ಆರಂಭಿಸುವ ಸಾಧ್ಯತೆ ಇದೆ. ಬೆಂಗಳೂರು, ಮಾ.9- ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಐವಿಎಫ್ ಚಿಕಿತ್ಸೆ ನೀಡಲು ಯೋಜನೆ ರೂಪಿಸಲಾಗಿದೆ.ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಐವಿಎಫ್ ಚಿಕಿತ್ಸೆ ನೀಡುವಂತಹ ಯೋಜನೆ ರೂಪಿಸಲಾಗಿದ್ದು, ನಗರದಲ್ಲಿರುವ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಐವಿಎಫ್ ಕೇಂದ್ರವನ್ನು ಶೀಘ್ರದಲ್ಲೇ ಆರಂಭಿಸಲಾಗುತ್ತಿದೆ.