ಮೈಸೂರು: ಪಕ್ಷದ ಹೈ ಕಮಾಂಡ್ ಇರು ಎಂದರೆ ಇರುತ್ತೇನೆ, ಮುಖ್ಯಮಂತ್ರಿಯಾಗಿ ಮುಂದುವರಿಯಿರಿ ಎಂದರೆ ಮುಂದುವರಿಯುತ್ತೇನೆ. ಹಾಗಾಗಿ ಎಲ್ಲವೂ ಹೈ ಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತಾಲ್ಲೂಕಿನ ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಇಂದು ತಮ್ಮನ್ನು ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾರೋ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈ ಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದು ಪುನರುಚ್ಚರಿಸಿದರು.
ಕೇವಲ ಮೈಸೂರಿನ ಜನರಷ್ಟೇ ಅಲ್ಲ, ಇಡೀ ನಾಡಿನ ಜನರು ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಬಯಸಿದ್ದಾರೆ. ಆದರೆ, ಅಂತಿಮ ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆ ಎರೆಡು ಬಜೆಟ್ ಮಂಡಿಸುತೇನೆ. ಈ ವಿಷಯದಲ್ಲಿ ಹೆ ಕಮಾಂಡ್ ತೀರ್ಮಾನಕ್ಕೆ ಬದ್ದನಾಗಿರುತ್ತೇನೆ ಎಂದು ತಿಳಿಸಿದರು.