2026-06-08 06:44:02

Stone pelting on Shivaji procession | ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಕಾಂಗ್ರೆಸ್‌ ಸರ್ಕಾರವೇ ಕಾರಣ ವಿಜಯೇಂದ್ರ ಆರೋಪ | Speed News Kannada

Stone pelting on Shivaji procession | ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಕಾಂಗ್ರೆಸ್‌ ಸರ್ಕಾರವೇ ಕಾರಣ ವಿಜಯೇಂದ್ರ ಆರೋಪ | Speed News Kannada

ಬೆಂಗಳೂರು: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು, ಚಪ್ಪಲಿ ತೂರಾಟದ ಪುಂಡಾಟಿಕೆ  ನಡೆದಿರುವುದನ್ನು ಬಿಜೆಪಿ ಖಂಡಿಸಿದೆ. ಪಕ್ಷದ ಅಧ್ಯಕ್ಷ ಬಿ ವೈ ವಿಜಯೇಂದ್ರ  ಅವರು ಈ ಕೃತ್ಯಕ್ಕೆ ಸರ್ಕಾರವನ್ನು ಹೊಣೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಇದು  ಖಂಡನೀಯ ಹಾಗೂ ಹೇಯ ಕೃತ್ಯ. ಈ ಓಲೈಕೆ ದುರಾಡಳಿತದ, ತುಘಲಕ್ ಕಾಂಗ್ರೆಸ್‌ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಶಾಂತಿ ಕದಡುವ ಕಿಡಿಗೇಡಿಗಳಿಗೆ ರಾಜಾಶ್ರಯ ಸಿಕ್ಕಿದೆ. ಪೊಲೀಸರ ಉಪಸ್ಥಿತಿಯಲ್ಲಿಯೇ ಕಲ್ಲು ತೂರಾಟ ನಡೆದರೆ, ಇನ್ನು ರಾಜ್ಯದಲ್ಲಿ ಜನಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಿಂದೂಗಳ ಹಬ್ಬ ಮತ್ತು ಮೆರವಣಿಗೆಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಇಂತಹ ನಿರಂತರ ದಾಳಿಗಳು ವ್ಯವಸ್ಥಿತ ಪಿತೂರಿಯಂತೆ ಕಾಣುತ್ತಿದೆ. ರಾಜ್ಯ ಸರ್ಕಾರ ತಮ್ಮ ಪರ ನಿಲ್ಲಲಿದೆ ಎನ್ನುವ ಧೈರ್ಯವಿಲ್ಲದೆ ಇಂತಹ ಪುಂಡಾಟಿಕೆ ನಡೆಯುವುದು ಸಾಧ್ಯವಿಲ್ಲ. ಈಗಲಾದರೂ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಸರ್ಕಾರ ತನ್ನ ಓಲೈಕೆ ರಾಜಕೀಯವನ್ನು ಬಿಟ್ಟು, ರಾಷ್ಟ್ರದ ಅಸ್ಮಿತೆಯಾಗಿರುವ ಶಿವಾಜಿ ಮಹಾರಾಜರ ಗೌರವಕ್ಕೆ ಧಕ್ಕೆ ತಂದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಮಾನ್ಯ ಮುಖ್ಯಮಂತ್ರಿಗಳೇ, ಹಿಂದೂ ಸಮಾಜದ ತಾಳ್ಮೆಯನ್ನು ಪರೀಕ್ಷಿಸಬೇಡಿ. ನಮ್ಮ ಆರಾಧ್ಯ ಪುರುಷರ, ನಾಡಿನ ಅಸ್ಮಿತೆಯ ವಿಷಯದಲ್ಲಿ ಸುಮ್ಮನಿರುವ ಪ್ರಶ್ನೆಯೇ ಇಲ್ಲ! ಎಂದು ಗುಡುಗಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.