ಬೆಂಗಳೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಕಚೇರಿಯಲ್ಲಿ ಇಂದು ರಾಜ್ಯದ ಎಲ್ಲಾ ಸಾರ್ವಜನಿಕ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಭಾಗವಹಿಸಿದ್ದರು.
ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹಲವು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕವನ್ನು ದೇಶದ ಮುಂಚೂಣಿ ಶಿಕ್ಷಣ ಕೇಂದ್ರವನ್ನಾಗಿ ರೂಪಿಸುವುದೇ ನಮ್ಮ ಸಂಕಲ್ಪವಾಗಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.