2026-06-08 02:43:03

Strict action will be taken if question paper is leaked | SSLC PUC ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ರೆ ಕಠಿಣ ಕ್ರಮ ಪೊಲೀಸರ ಎಚ್ಚರಿಕೆ | Speed News Kannada

Strict action will be taken if question paper is leaked | SSLC PUC ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ರೆ ಕಠಿಣ ಕ್ರಮ ಪೊಲೀಸರ ಎಚ್ಚರಿಕೆ | Speed News Kannada

ಬೆಂಗಳೂರು: ಪಿಯುಸಿ ಅಂತಿಮ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17‌ ರವರೆಗೆ ಮತ್ತು ಎಸ್‌ ಎಸ್‌ ಎಲ್‌ ಸಿ ಅಂತಿಮ ಪರೀಕ್ಷೆಗಳು ಮಾರ್ಚ್‌  18 ರಿಂದ ಏಪ್ರಿಲ್‌ 2 ರವರೆಗೆ ನಡೆಯಲಿವೆ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ಈ ಎರಡೂ ಪರೀಕ್ಷೆಗಳು ನಿಷ್ಪಕ್ಷಪಾತವಾಗಿ, ಸುರಕ್ಷತೆಯಿಂದ ಹಾಗೂ ಯಾವುದೇ ಅಡ್ಡಿ-ಆತಂಕಗಳಿಗೆ ಆಸ್ಪದವಾಗದಂತೆ ಸುಸೂತ್ರವಾಗಿ ನಡೆಯುವ ಅವಶ್ಯಕತೆ ಇರುತ್ತದೆ. 
ಈ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗಿದೆ;
1. ಪರೀಕ್ಷಾ ಕೇಂದ್ರಗಳನ್ನು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಿ, ಪರೀಕ್ಷಾ ಕೇಂದ್ರಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.
2. ಪ್ರಶ್ನೆಪತ್ರಿಕೆ ಸೋರಿಕೆ, ವಂಚನೆಯ ಸಿಂಡಿಕೇಟ್‌ಗಳು ಅಥವಾ ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಮಾಹಿತಿ ಪ್ರಸಾರದಂತಹ ಬೆದರಿಕೆಗಳ ಬಗ್ಗೆ ತೀವ್ರವಾಗಿ ನಿಗಾ ವಹಿಸಲಾಗುತ್ತಿದೆ. ಸಂಬಂಧ ಯಾವುದೇ ವ್ಯಕ್ತಿಗಳು ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಕೊಂಡಿರುವುದು ಕಂಡುಬಂದಲ್ಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
3. ವಿದ್ಯಾರ್ಥಿ/ಪೋಷಕರನ್ನು ಯಾವುದೇ ರೀತಿಯಲ್ಲಿ ದಿಕ್ಕು ತಪ್ಪಿಸುವ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುವುದು.
4. ಹಿಂದಿನ ವರ್ಷಗಳಲ್ಲಿ ಪರೀಕ್ಷಾ ಸಂದರ್ಭಗಳಲ್ಲಿ ಪರಿಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಮೇಲೆ ತೀವ್ರ ನಿಗಾ ವಹಿಸಲಾಗುವುದು.
5. ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಸೆಕ್ಷನ್ 163 ಬಿಎನ್ಎಸ್ಎಸ್ಎಸ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಯಾರೂ ಸೇರದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಪೊಲೀಸ್‌ ಮಾಹನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.