2026-06-08 01:23:19

Student attacks on exam invigilator | ನಕಲು ಮಾಡುತ್ತಿದ್ದುದನ್ನು ತಡೆದಿದ್ದಕ್ಕೆ ಪರೀಕ್ಷಾ ಮೇಲ್ವಿಚಾರಕನ ಮೇಲೆಯೇ ವಿದ್ಯಾರ್ಥಿಯಿಂದ ಹಲ್ಲೆ | Speed News Kannada

Student attacks on exam invigilator | ನಕಲು ಮಾಡುತ್ತಿದ್ದುದನ್ನು ತಡೆದಿದ್ದಕ್ಕೆ ಪರೀಕ್ಷಾ ಮೇಲ್ವಿಚಾರಕನ ಮೇಲೆಯೇ ವಿದ್ಯಾರ್ಥಿಯಿಂದ ಹಲ್ಲೆ | Speed News Kannada

ಕಲಬುರಗಿ: ಹೋಮಿಯೋಪಥಿ ಪರೀಕ್ಷೆ ವೇಳೆ ನಕಲು ಮಾಡುತ್ತಿರುವುದನ್ನು ತಡೆದ ಪರೀಕ್ಷಾ ಮೇಲ್ವಿಚಾರಕನ ಮೇಲೆಯೇ ವಿದ್ಯಾರ್ಥಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ಡಾ.ಮಾಲಕರೆಡ್ಡಿ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಪರೀಕ್ಷಾ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಸಿಸಿಕ್ಯಾಮರಾದಲ್ಲಿ ಘಟನೆ ಸೆರೆಯಾಗಿದೆ.
ಕೆಲ ದಿನಗಳ ಹಿಂದೆ ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ ವಿಷಯದ ಆಂತರಿಕ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ವಿದ್ಯಾರ್ಥಿ ಶಬಾಜ್ ಮೊಬೈಲ್ ಫೋನ್ ಬಳಸಿ ನಕಲು ಮಾಡುತ್ತಿದ್ದ. ಅದನ್ನು ಸಹಾಯಕ ಪ್ರಾಧ್ಯಾಪಕ ಶಿವರಾಜ್ ಕುಮಾರ್ ಪ್ರಶ್ನಿಸಿದ್ದು, ಉತ್ತರ ಪತ್ರಿಕೆ ವಶಕ್ಕೆ ಪಡೆದಿದ್ದಾರೆ. ಬಳಿಕ ವಿದ್ಯಾರ್ಥಿಗೆ ಪರೀಕ್ಷಾ ಅ ಕೊಠಡಿಯಿಂದ ಹೊರ ಹೋಗುವಂತೆ ಸೂಚಿಸಿದ್ದಾರೆ.
ಇದರಿಂದ ಕೋಪಗೊಂದ ವಿದ್ಯಾರ್ಥಿ ಸಹಾಯಕ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದ್ದಾನೆ. ಇತರೆ ವಿದ್ಯಾರ್ಥಿಗಳು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಬಳಿಕ ಹಲ್ಲೆ ನಡೆಸಿದ ವಿದ್ಯಾರ್ಥಿಯನ್ನು ಪರೀಕ್ಷಾ ಕೊಠಡಿಯಿಂದ ಹೊರ ಕಳುಹಸಾಲಾಗಿದೆ.
ಹಲ್ಲೆ ಪ್ರಕರಣ ಕುರಿತು ಆಂತರಿಕ ಸಮಿತಿ ರಚಿಸಲಾಗಿದೆ. ಈ ಸಮಿತಿ ನೀಡಿದ ವರದಿಯನ್ನು ಕಾಲೇಜಿನ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಎಂದು ಪ್ರಾಚಾರ್ಯರು ಮಾಹಿತಿ ನೀಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.