2026-06-25 02:11:14

Student dies on PUC result day | Relatives suspect her parents|PUC ರಿಸಲ್ಟ್ ದಿನವೇ ಪ್ರಾಣಬಿಟ್ಟ ವಿದ್ಯಾರ್ಥಿನಿ |ಹೆತ್ತಮ್ಮನ ಮೇಲೆಯೇ ಸಂಬಂಧಿಕರ ಅನುಮಾನ|Speed News Kannada

Student dies on PUC result day | Relatives suspect her parents|PUC ರಿಸಲ್ಟ್ ದಿನವೇ ಪ್ರಾಣಬಿಟ್ಟ ವಿದ್ಯಾರ್ಥಿನಿ |ಹೆತ್ತಮ್ಮನ ಮೇಲೆಯೇ ಸಂಬಂಧಿಕರ ಅನುಮಾನ|Speed News Kannada

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ದಿನವೇ ತನುಶ್ರೀ ಎಂಬ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮನೋರಾಯನಪಾಳ್ಯದಲ್ಲಿ ನಡೆದಿದೆ. ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಆಶಾ ಪೊಲೀಸರಿಗೆ ತಿಳಿಸಿದ್ದಾರೆ. ಸದ್ಯ ವಿದ್ಯಾರ್ಥಿನಿಯ ಮೃತದೇಹವನ್ನು ಕೆ.ಜಿ. ಹಳ್ಳಿಯ ಅಂಬೇಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಈ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಈ ಪ್ರಕರಣದಲ್ಲಿ ತಾಯಿ ಆಶಾ ಅವರ ವರ್ತನೆ ಸಂಬಂಧಿಕರಲ್ಲಿ ತೀವ್ರ ಅನುಮಾನ ಮೂಡಿಸಿದೆ. ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿದ್ದರೂ, ರಾತ್ರಿ 10 ಗಂಟೆಯವರೆಗೂ ಪೊಲೀಸರಿಗೆ ಮಾಹಿತಿ ನೀಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ. ಅಲ್ಲದೆ, ಪೊಲೀಸರು ಬರುವ ಮೊದಲೇ ಕೆಲ ಯುವಕರ ಸಹಾಯದಿಂದ ಮೃತದೇಹವನ್ನು ಕೆಳಗೆ ಇಳಿಸಿರುವುದು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದು, ತಾಯಿಯೇ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಯ ನಾಟಕವಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಹೆಬ್ಬಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಸಾವು ಸಂಭವಿಸಿದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡದಿದ್ದಕ್ಕೆ ಕಾರಣವೇನು ಮತ್ತು ಮೃತದೇಹವನ್ನು ಅವಸರದಲ್ಲಿ ಕೆಳಗೆ ಇಳಿಸಿದ್ದು ಏಕೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ತನುಶ್ರೀ ಸಾವಿನ ಹಿಂದಿನ ಅಸಲಿ ಸತ್ಯ ಹೊರಬರಬೇಕಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.