2026-03-07 07:15:48

Student given drugs and gang raped by friends | ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಸ್ನೇಹಿತರಿಂದಲೇ ಗ್ಯಾಂಗ್ ರೇಪ್ | Speed News Kannada

Student given drugs and gang raped by friends | ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಸ್ನೇಹಿತರಿಂದಲೇ ಗ್ಯಾಂಗ್ ರೇಪ್ | Speed News Kannada

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ನಗರದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಏನಿದು ಘಟನೆ ಬನ್ನೇರುಘಟ್ಟದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ, ಮೂಲತಃ ಪಶ್ಚಿಮ ಬಂಗಾಳದ ಡಿಕ್ಸಿನ್ ಎಂಬಾತನೊಂದಿಗೆ ಸ್ನೇಹ ಹೊಂದಿದ್ದರು ಎನ್ನಲಾಗಿದೆ. ಇತ್ತೀಚೆಗೆ ಆಕೆ ಡಿಕ್ಸಿನ್ ಮತ್ತು ಆತನ ಸ್ನೇಹಿತ ನಿಖಿಲ್ ಎಂಬುವವರ ಜೊತೆಗೆ ವಿಲ್ಲಾವೊಂದಕ್ಕೆ ಭೇಟಿ ನೀಡಿದ್ದರು.
ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಆರೋಪಿಗಳಾದ ಡಿಕ್ಸಿನ್ ಮತ್ತು ನಿಖಿಲ್ ಆಕೆಗೆ ಮಾದಕ ದ್ರವ್ಯ ನೀಡಿ ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಪ್ರೀತಿಯ ನಾಟಕವಾಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆಕೆ ಗಂಭೀರ ಆರೋಪ ಮಾಡಿದ್ದಾರೆ. ಗ್ಯಾಂಗ್ ರೇಪ್ ಬಳಿಕ ಯುವತಿ ಮೇಲೆ ಕಾಮುಕರು ಹಲ್ಲೆ ಕೂಡ ನಡೆಸಿರುವ ಆರೋಪ ಕೇಳಿಬಂದಿದೆ. ಇನ್ ಸ್ಟಾಗ್ರಾಂ ಮೂಲಕ ಯುವತಿಗೆ ಆರೋಪಿಗಳ ಪರಿಚಯವಾಗಿತ್ತು ಎನ್ನಲಾಗಿದ್ದು, ವಿದ್ಯಾರ್ಥಿನಿಯ ದೂರಿನ ಮೇರೆಗೆ ಅಮೃತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಆರೋಪಿಗಳ ಪೈಕಿ ನಿಖಿಲ್ ಹಾಸನ ಜಿಲ್ಲೆಯ ಸಕಲೇಶಪುರ ಮೂಲದವನು ಎಂದು ಗುರುತಿಸಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದು, ತನಿಖೆ ಮುಂದುವರಿದಿದೆ. ಪ್ರೀತಿ ಮತ್ತು ಸ್ನೇಹದ ಹೆಸರಿನಲ್ಲಿ ನಂಬಿಸಿ ದ್ರೋಹ ಎಸಗಲಾಗಿದೆ ಎಂದು ಸಂತ್ರಸ್ತೆ ದೂರಿದ್ದಾರೆ. ಇನ್ನೊಂದು ಕಡೆ ಯುವತಿಯೇ ಹನಿಟ್ರ್ಯಾಪ್ ಮಾಡಿರುವ ಆರೋಪ ಕೇಳಿಬಂದಿದೆ.ಅದೇನೆ ಇರಲಿ ಪೊಲೀಸ್ ತನಿಖೆಯಿಂದಷ್ಟೇ ಘಟನೆಯ ಸತ್ಯಾನುಸತ್ಯತೆ ತಿಳಿದು ಬರಬೇಕಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.