2026-06-08 06:47:47

Students flee hostel fearing SSLC exams | SSLC ಪರೀಕ್ಷೆಗೆ ಹೆದರಿ ಹಾಸ್ಟೆಲ್‌ ನಿಂದ ವಿದ್ಯಾರ್ಥಿಗಳು ಪರಾರಿ | Speed News Kannada

Students flee hostel fearing SSLC exams | SSLC ಪರೀಕ್ಷೆಗೆ ಹೆದರಿ ಹಾಸ್ಟೆಲ್‌ ನಿಂದ ವಿದ್ಯಾರ್ಥಿಗಳು ಪರಾರಿ | Speed News Kannada

ಹಾವೇರಿ: ನಾಳೆಯಿಂದ ರಾಜ್ಯಾದ್ಯಣತ SSLC ಪರೀಕ್ಷೆಗಳು ಆರಂಭವಾಗುತ್ತಿವೆ. ವರ್ಷವಿಡೀ ಕಷ್ಟಪಟ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸಿದ್ದಾರೆ. ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕು ಸುಣಕಲಬಿದರಿ ಅಲ್ಪ ಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ 5 ವಿದ್ಯಾರ್ಥಿಗಳು ಪರೀಕ್ಷೆಗೆ ಹೆದರಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ವಿದ್ಯಾರ್ಥಿಗಳು  ನಾಪತ್ತೆಯಾಗಿದ್ದರೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿಟ್ಟಿದ್ದಾರೆ ಎಂದು ಹೇಳಳಾಗುತ್ತಿದೆ. ಈ ವಿದ್ಯಾರ್ಥಿಗಳು ಬೇರೊಂದು ಸ್ಥಳದಲ್ಲಿ ಇದ್ದಾರೆ ಎಂಬ ಹಾರಿಕೆ ಉತ್ತರ ನೀಡುತ್ತಿದ್ದಾರೆ.
ರಾತ್ರಿ ವೇಳೆ ವಾಚ್ಮೆನ್ ಇಲ್ಲದಿರುವುದನ್ನು ಗಮನಿಸಿ ಐವರು ವಿದ್ಯಾರ್ಥಿಗಳು, ಇಂದು ನಸುಕಿನ ಜಾವ ವಸತಿ ಶಾಲೆ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.