ಹಾವೇರಿ: ನಾಳೆಯಿಂದ ರಾಜ್ಯಾದ್ಯಣತ SSLC ಪರೀಕ್ಷೆಗಳು ಆರಂಭವಾಗುತ್ತಿವೆ. ವರ್ಷವಿಡೀ ಕಷ್ಟಪಟ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸಿದ್ದಾರೆ. ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕು ಸುಣಕಲಬಿದರಿ ಅಲ್ಪ ಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ 5 ವಿದ್ಯಾರ್ಥಿಗಳು ಪರೀಕ್ಷೆಗೆ ಹೆದರಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿಟ್ಟಿದ್ದಾರೆ ಎಂದು ಹೇಳಳಾಗುತ್ತಿದೆ. ಈ ವಿದ್ಯಾರ್ಥಿಗಳು ಬೇರೊಂದು ಸ್ಥಳದಲ್ಲಿ ಇದ್ದಾರೆ ಎಂಬ ಹಾರಿಕೆ ಉತ್ತರ ನೀಡುತ್ತಿದ್ದಾರೆ.
ರಾತ್ರಿ ವೇಳೆ ವಾಚ್ಮೆನ್ ಇಲ್ಲದಿರುವುದನ್ನು ಗಮನಿಸಿ ಐವರು ವಿದ್ಯಾರ್ಥಿಗಳು, ಇಂದು ನಸುಕಿನ ಜಾವ ವಸತಿ ಶಾಲೆ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ.