2026-03-07 02:04:53

study centers in the names of kuvempu, anantamurthy; Speed News Kannada

study centers in the names of kuvempu, anantamurthy; Speed News Kannada

ಕನ್ನಡ ಮತ್ತು ಸಂಸ್ಕೃತಿ - ಜಾನಪದ ಸಂಗಮ ಕಾರ್ಯಕ್ರಮ-2 ಕೋಟಿ. ಶಿಶುನಾಳ ಷರೀಫ, ಬೆಳವಡಿ ಮಲ್ಲಮ್ಮ ಹೆಸರಿನಲ್ಲಿ ಪ್ರತಿಷ್ಠಾನ. ಅನಂತಮೂರ್ತಿ, ಕುವೆಂಪು ಹೆಸರಿನಲ್ಲಿ ಅಧ್ಯಯನ ಪೀಠ. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ 2 ಕೋಟಿ. ತಿಗಳರ ಉತ್ಸವಕ್ಕೆ 2 ಕೋಟಿ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ - ಸಿನಿಮಿತ್ರ ಆನ್ ಲೈನ್ ಡಿಜಿಟಲ್ ವ್ಯವಸ್ಥೆ ಜಾರಿ. ಕರ್ನಾಟಕ ಫಿಲ್ಮ್ ಲೊಕೇಷನ್ ಡಿಜಿಟಲ್ ಮ್ಯಾಪ್ ಅಭಿವೃದ್ಧಿ. ಡಿಜಿಟಲ್ ಮ್ಯಾಪ್ ಅಭಿವೃದ್ಧಿಗೆ 1 ಕೋಟಿ ಅನುದಾನ. ಗುಣಾತ್ಮಕ ಚಲನಚಿತ್ರಗಳಿಗೆ 20 ಕೋಟಿ ಸಹಾಯಧನ. ಮಹಾತ್ಮಗಾಂಧಿ ಜನ ಶಿಕ್ಷಣ ಕೇಂದ್ರ ಯೋಜನೆ ಜಾರಿ.

ಕಾನೂನು ವಲಯ -ಕೋರ್ಟ್ ಕಟ್ಟಡ, ನ್ಯಾಯಾಧೀಶರಿಗೆ ಮನೆ ನಿರ್ಮಾಣ-175 ಕೋಟಿ. ರಾಮನಗರದಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾನ. ಬೆಂಗಳೂರು, ಧಾರವಾಡ, ಮೈಸೂರು, ಕಲಬುರಗಿಯಲ್ಲಿ ʼಇ ಕೋರ್ಟ್ʼ-10 ಕೋಟಿ. ಸರ್ಕಾರದಿಂದ ರಚಿಸುವ ಎಲ್ಲಾ ಕಾನೂನು ಕನ್ನಡದಲ್ಲೇ ತಯಾರಿ. ಕೇಸ್ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸುವ ನ್ಯಾಯಾಧೀಶರು, ವಕೀಲರಿಗೆ ತರಬೇತಿ.

ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.

ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಕ್ಯಾನ್ಸರ್ ಆಸ್ಪತ್ರೆಯನ್ನು ಮುನಿರಾಬಾದ್-ಟಿ.ಬಿ.ಡ್ಯಾಂನಲ್ಲಿ ಸ್ಥಾಪಿಸಲಾಗುವುದು.

ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು.

ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು. ಬೆಂಗಳೂರು ವೈದ್ಯಕೀಯ ಕಾಲೇಜಿನ MBBS ಮತ್ತು BDS ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ 10 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

ಕಾರ್ಮಿಕ ಇಲಾಖೆ:

 ರಾಜ್ಯದಲ್ಲಿನ ಸರ್ಕಾರಿ ನೌಕರರನ್ನೊಳಗೊಂಡಂತೆ ವಿವಿಧ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನದ ವೇತನ ಸಹಿತ ರಜೆಯನ್ನು ಪಡೆಯಲು ಅವಕಾಶ ಮಾಡಿಕೊಡಲಾಗಿದೆ.

ಕರ್ನಾಟಕ ರಾಜ್ಯ ಕಾರ್ಮಿಕರ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಅವಲಂಬಿತರಿಗೆ ವಿವಿಧ ಕಲ್ಯಾಣ ಕಾರ್ಯಕ್ರಮಗಳಡಿ ಒಟ್ಟು 43,936 ಅರ್ಹ ಫಲಾನುಭವಿಗಳಿಗೆ ಒಟ್ಟು 39 ಕೋಟಿ ರೂ.ಗಳ ಧನಸಹಾಯ ನೀಡಲಾಗಿದೆ.

 ಆಶಾದೀಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಒಟ್ಟು 5,062 ಅಭ್ಯರ್ಥಿಗಳ ಪರವಾಗಿ 18 ಕೋಟಿ ರೂ.ಗಳನ್ನು ಅರ್ಹ ಉದ್ಯೋಗದಾತರಿಗೆ ಮರುಪಾವತಿಸಲಾಗಿದೆ.

ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ತಲಾ 60 ಕೋಟಿ ರೂ. ವೆಚ್ಚದಲ್ಲಿ 10 GTTC ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ ಒಟ್ಟಾರೆ 600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು.

6 ರಿಂದ 12ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ 2025-26ನೇ ಸಾಲಿನಲ್ಲಿ 42 ಶ್ರಮಿಕ ವಸತಿ ಶಾಲೆಗಳನ್ನು ಅನುಮೋದಿಸಲಾಗಿದೆ. 2026-27ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 62 ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಎಲ್ಲಾ 104 ಶಾಲೆಗಳನ್ನು ಬಾಡಿಗೆ ಕಟ್ಟಡಗಳಲ್ಲಿ ಪ್ರಾರಂಭಿಸಲಾಗುವುದು. (ಅನುಬಂಧ-4 ಮತ್ತು 5)

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರು ಹಾಗೂ ಅವರ ಮಕ್ಕಳಿಗೆ ವೃತ್ತಿ ಬುನಾದಿ ಹಾಗೂ ಉನ್ನತಿ ಕೌಶಲ್ಯ ತರಬೇತಿಯನ್ನು ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಅತ್ಯಾಧುನಿಕ ಮೂಲಸೌಕರ್ಯವನ್ನು ಅಕಾಡೆಮಿಯನ್ನು ಸ್ಥಾಪಿಸಲಾಗುವುದು.

ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಕೌಶಲ್ಯಾಧಾರಿತ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಆನ್‌ಲೈನ ಉದ್ಯೋಗ ವಿನಿಮಯ ಕೇಂದ್ರವನ್ನು ಸ್ಥಾಪಿಸುವ 'ಕಾಯಕ ಭಾಗ್ಯ' ಎಂಬ ಯೋಜನೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ ಜಾರಿಗೆ ತರಲಾಗುವುದು.

ಕಾರ್ಮಿಕ ರಾಜ್ಯ ವಿಮಾ ಸೊಸೈಟಿಯ ರಚನೆಯಿಂದಾಗಿ ಪ್ರಸ್ತುತ ನೀಡಲಾಗುತ್ತಿರುವ ವೈದ್ಯಕೀಯ ಸೇವೆಗಳನ್ನು 50 ಲಕ್ಷ ವಿಮಾದಾರರಿಗೆ ಹಾಗೂ 150 ಲಕ್ಷ ಅವಲಂಬಿತರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಒದಗಿಸಲಾಗುವುದು. ಈ ಸೊಸೈಟಿಯ ಮುಖಾಂತರ ಕೆಳಕಂಡ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು:

* ಹುಬ್ಬಳ್ಳಿ, ಇಂದಿರಾನಗರ, ಮೈಸೂರು ಮತ್ತು ದೊಡ್ಡಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಹಾಗೂ ಇಂದಿರಾನಗರದಲ್ಲಿ ಮೂರು ವರ್ಷದ PG (DNB) ಕೋರ್ಸ್ ಗಳನ್ನು ಪ್ರಾರಂಭಿಸಲಾಗುವುದು;

* Breast and Cervical Cancer Cancer ತಡೆಗಟ್ಟುವ ಲಸಿಕಾ Cervical ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗುವುದು;

*ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.