2026-04-27 05:59:10

Sudhakar health condition is critical, a host of dignitaries visit the hospital|ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ಗಣ್ಯರ ದಂಡು|Speed News Kannada

Sudhakar health condition is critical, a host of dignitaries visit the hospital|ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ಗಣ್ಯರ ದಂಡು|Speed News Kannada

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಸಚಿವ ಡಿ. ಸುಧಾಕರ್ ಅವರಿಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಕಿಮ್ಸ್  ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಚಿವರು ಸದ್ಯ ವೆಂಟಿಲೇಟರ್ ಮತ್ತು ಎಕ್ಮೋ ಬೆಂಬಲದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಬ್ರೈನ್ ನಾರ್ಮಲ್ ಸ್ಥಿತಿಗೆ ಬರಲು ಸಮಯ ಹಿಡಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದಾಗ್ಯೂ, ವೈದ್ಯರು ಸಚಿವರ ಚಿಕಿತ್ಸೆಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ.ಸಚಿವರ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಗೃಹಸಚಿವ ಡಾ. ಜಿ. ಪರಮೇಶ್ವರ್ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಭೇಟಿ ನೀಡಿದ್ದಾರೆ.

ಸಚಿವರ ಕುಟುಂಬಸ್ಥರಿಗೆ ಗಣ್ಯರು ಧೈರ್ಯ ತುಂಬಿದ್ದಾರೆ. ಸಚಿವರ ಆರೋಗ್ಯದ ಬಗ್ಗೆ ಸರ್ಕಾರ ಮಾಹಿತಿ ಮುಚ್ಚಿಡುತ್ತಿದೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವ ಡಾ. ಜಿ. ಪರಮೇಶ್ವರ್, "ಆರೋಗ್ಯ ವಿಚಾರದಲ್ಲಿ ಮುಚ್ಚಿಡುವುದು ಏನೂ ಇಲ್ಲ, ಕುಮಾರಸ್ವಾಮಿಯವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.ಸಚಿವರು ಶೀಘ್ರ ಗುಣಮುಖರಾಗಿ ಮರಳಿ ಬರಲಿ ಎಂದು ಗಣ್ಯರು ಮತ್ತು ಅಭಿಮಾನಿಗಳು ಹಾರೈಸುತ್ತಿದ್ದಾರೆ

 

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.