2026-06-08 01:30:54

Supreme Court shocks Pawan Khera, rejects bail extension | ಪವನ್ ಖೇರಾಗೆ ಸುಪ್ರೀಂ ಶಾಕ್, ಜಾಮೀನು ವಿಸ್ತರಣೆಗೆ ನಿರಾಕರಣೆ | Speed news kannada

Supreme Court shocks Pawan Khera, rejects bail extension | ಪವನ್ ಖೇರಾಗೆ ಸುಪ್ರೀಂ ಶಾಕ್, ಜಾಮೀನು ವಿಸ್ತರಣೆಗೆ ನಿರಾಕರಣೆ | Speed news kannada

ಕಾಂಗ್ರೆಸ್ ಸಂಸದ ಪವನ್ ಖೇರಾ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿರುವ ಪ್ರಕರಣದಲ್ಲಿ ಖೇರಾ ಅವರ ಜಾಮೀನು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಆದೇಶವನ್ನು ಹೊರಡಿಸಿದೆ. ಅರ್ಜಿದಾರರು ಈ ಕುರಿತು ಅಸ್ಸಾಂನ ಸಂಬಂಧಪಟ್ಟ  ನ್ಯಾಯಾಲಯವನ್ನೇ ಸಂಪರ್ಕಿಸಬೇಕು ಎಂದು ಪೀಠವು ಸ್ಪಷ್ಟಪಡಿಸಿದೆ. ಕೆಲವು ದಿನಗಳ ಹಿಂದಷ್ಟೇ ತೆಲಂಗಾಣ ಹೈಕೋರ್ಟ್ ಪವನ್ ಖೇರಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆಯಾದಾಗ ಸುಪ್ರೀಂ ಕೋರ್ಟ್ ಆ ಜಾಮೀನಿಗೆ ತಡೆ ನೀಡಿತ್ತು. ಸುಪ್ರೀಂ ಕೋರ್ಟ್‌ನ ಈ ಆದೇಶದಿಂದಾಗಿ ಪವನ್ ಖೇರಾ ಅವರಿಗೆ ಇದ್ದ ತಾತ್ಕಾಲಿಕ ರಿಲೀಫ್ ಅಂತ್ಯಗೊಂಡಿದೆ. ಈಗ ಅವರು ಅಸ್ಸಾಂನ ನ್ಯಾಯಾಂಗ ವ್ಯವಸ್ಥೆಯ ಮುಂದೆ ಹಾಜರಾಗಿ ತಮ್ಮ ವಾದ ಮಂಡಿಸಬೇಕಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.