2026-03-07 06:36:50

Supreme Court stays interim order | ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ | Speed News Kannada

Supreme Court stays interim order | ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ | Speed News Kannada

ನವದೆಹಲಿ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಎನ್.ಎಸ್ ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಇಂದು ಸುಬ್ಬಾ ರೆಡ್ಡಿ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಹಾಗೂ ನ್ಯಾಯಮೂರ್ತಿ ಜಾಯ್‌ಮಲ್ಯ ಬಾಗ್ಚಿ ಪೀಠವು ನಡೆಸಿತು. 
ಎದುರಾಳಿ, ಚುನಾವಣಾ ಆಯೋಗ ಮತ್ತು ಸಂಬಂಧಪಟ್ಟ ವ್ಯಕ್ತಿಗಳಿಗೆ ಅಫಿಡವಿಟ್, ಕೌಂಟರ್ ಅಫಿಡವಿಟ್ ಸಲ್ಲಿಸಲು ಸುಪ್ರೀಂ ಕೋರ್ಟ್ 6 ವಾರಗಳ ಕಾಲಾವಕಾಶವನ್ನು ನೀಡಿದೆ.
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ನ ಎಸ್.ಎನ್. ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. 
ಶಾಸಕ ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಮತ್ತು ನನ್ನನ್ನು ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ ಭಾಗಶಃ ಪುರಸ್ಕರಿಸಿ ಫೆಬ್ರುವರಿ 16ರಂದು ಆದೇಶ ಹೊರಡಿಸಿತ್ತು. 
2023ರ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹುರಿಯಾಳಾಗಿ ಸ್ಪರ್ಧಿಸಿದ್ದ ಎಸ್‌.ಎನ್‌. ಸುಬ್ಬಾರೆಡ್ಡಿ 82,128 ಮತಗಳನ್ನು ಪಡೆದು ಜಯಗಳಿಸಿದ್ದರು. ಸಿ.ಮುನಿರಾಜು 62,949 ಮತ ಪಡೆದು ಪರಭವಗೊಂಡಿದ್ದರು. 
ನಂತರದ ಬೆಳವಣಿಗೆಗಳಲ್ಲಿ ಸುಬ್ಬಾರೆಡ್ಡಿ ಆಯ್ಕೆ ಪ್ರಶ್ನಿಸಿ ಸಿ.ಮುನಿರಾಜು 2023ರ ಜೂನ್‌ 24ರಂದು ಹೈಕೋರ್ಟ್‌ ಮೆಟ್ಟಿಲೇರಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.