2026-07-23 07:15:36

SUVENDU ADHIKARI | ಮೂರನೇ ಮದುವೆಯಾಗಿದ್ರೆ ಇನ್ಮುಂದೆ ಆಪತ್ತು ಸಿಗೋದಿಲ್ಲ ಸರ್ಕಾರಿ ಸವಲತ್ತು! | SNK

SUVENDU ADHIKARI | ಮೂರನೇ ಮದುವೆಯಾಗಿದ್ರೆ ಇನ್ಮುಂದೆ ಆಪತ್ತು ಸಿಗೋದಿಲ್ಲ ಸರ್ಕಾರಿ ಸವಲತ್ತು! | SNK

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ಸೌಲಭ್ಯಗಳ ದುರುಪಯೋಗವನ್ನು ತಡೆಗಟ್ಟಲು ಮತ್ತು ಯೋಜನೆಗಳು ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪುವಂತೆ ಮಾಡಲು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಎರಡು ಅಥವಾ ಅದಕ್ಕಿಂತ ಹೆಚ್ಚು ಮದುವೆಯಾಗಿರುವ ಕುಟುಂಬಗಳಿಗೆ ಇನ್ಮುಂದೆ ಯಾವುದೇ ಸರ್ಕಾರಿ ಯೋಜನೆಗಳ ಲಾಭ ಸಿಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಲಕ್ಷ್ಮಿರ್ ಭಂಡಾರ್ ಮತ್ತು ಅನ್ನಪೂರ್ಣ ಸೇರಿದಂತೆ ರಾಜ್ಯದ ಪ್ರಮುಖ ಜನಕಲ್ಯಾಣ ಯೋಜನೆಗಳಿಗೆ ಈ ಹೊಸ ನಿಯಮಗಳು ಅನ್ವಯವಾಗಲಿವೆ.

ನಿಯಮಗಳ ಪ್ರಕಾರ, ಸರ್ಕಾರದ ಆದೇಶದ ಹೊರತಾಗಿಯೂ ಅಥವಾ ತುರ್ತು ಲಸಿಕೆ ಅಭಿಯಾನಗಳ ಸಂದರ್ಭದಲ್ಲಿ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಲು ನಿರಾಕರಿಸುವ ಪೋಷಕರಿಗೆ ಸರ್ಕಾರಿ ಸೌಲತ್ತುಗಳನ್ನು ಕಡಿತಗೊಳಿಸಲಾಗುತ್ತದೆ. ಇದರೊಂದಿಗೆ ಸರ್ಕಾರಿ ಶಾಲೆಗಳಿಗೆ ಹೋಗದೆ ಕೇವಲ ಕೆಲವು ನಿರ್ದಿಷ್ಟ ಧಾರ್ಮಿಕ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾಗಿರುವ ಮಕ್ಕಳು ಹಾಗೂ ಭಾರತದ ನಾಗರಿಕರಲ್ಲದ ವ್ಯಕ್ತಿಗಳಿಗೂ ಇನ್ಮುಂದೆ ಸರ್ಕಾರಿ ಯೋಜನೆಗಳ ಸೌಲಭ್ಯಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ.

ಇದೇ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವವರ ವಿರುದ್ಧವೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಪ್ರತಿಭಟನೆ ಅಥವಾ ಗಲಭೆಗಳ ಹೆಸರಿನಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸ್ವತ್ತಿಗೆ ಹಾನಿ ಉಂಟುಮಾಡಿದರೆ, ಹೊಸ ಕಾಯ್ದೆಯನ್ವಯ ಆಸ್ತಿಯ ಒಟ್ಟು ಮೌಲ್ಯದ ಮೂರು ಪಟ್ಟು ಹಣವನ್ನು ಆರೋಪಿಗಳಿಂದಲೇ ವಸೂಲಿ ಮಾಡಲಾಗುವುದು. ಅದರಲ್ಲೂ ವಿಶೇಷವಾಗಿ ಕೈಗಾರಿಕಾ ವಲಯಗಳನ್ನು ಗುರಿಯಾಗಿಸಿಕೊಂಡು ಧ್ವಂಸ ಕೃತ್ಯ ಎಸಗಿದರೆ ಭಾರಿ ಮೊತ್ತದ ದಂಡ ವಿಧಿಸಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.