2026-05-02 10:42:07

Swing Accident | ಉಯ್ಯಾಲೆ ಮುರಿದು ಬಿದ್ದು ಹಲವರಿಗೆ ಗಾಯ ಪೇದೆ ಸಾ*ವು! | Speed News kannada

Swing  Accident | ಉಯ್ಯಾಲೆ ಮುರಿದು ಬಿದ್ದು ಹಲವರಿಗೆ ಗಾಯ ಪೇದೆ ಸಾ*ವು! | Speed News kannada

ಚಂಡೀಗಢ: ಹರಿಯಾಣದ ಫರೀದಾಬಾದ್‌ನಲ್ಲಿ ನಡೆಯುತ್ತಿದ್ದ ಸೂರಜ್‌ ಕುಂಡ್ ಜಾತ್ರೆಯಲ್ಲಿ (Surajkund Fair) ದೊಡ್ಡ ದುರಂತ ಸಂಭವಿಸಿದೆ. ಜಾತ್ರೆಯಲ್ಲಿ ಜನರ ಮೋಜಿಗಾಗಿ ಇರಿಸಲಾಗಿದ್ದ ಉಯ್ಯಾಲೆ ಒಂದು ಮುರಿದು ಬಿದ್ದು, ಪೊಲೀಸ್ ಪೇದೆ ಒಬ್ಬರ ಸಾವಾಗಿದೆ.ದುರಂತದಲ್ಲಿ 13 ಜನರಿಗೆ ಗಾಯಗಳಾಗಿವೆ.
ದುರಂತ ಘಟನೆಯ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಉಯ್ಯಾಲೆ ಪ್ರಿಯರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಶನಿವಾರ ಫರಿದಾಬಾದ್‌ನ ಸೂರಜ್‌ ಕುಂಡ್ ಜಾತ್ರೆಯಲ್ಲಿ ಸುನಾಮಿ ಉಯ್ಯಾಲೆ ಕುಸಿದು ಬಿದ್ದ ಪರಿಣಾಮ ಒಬ್ಬ ಪೊಲೀಸ್ ಸಾವನ್ನಪ್ಪಿದರು ಮತ್ತು ಹಲವಾರು ಜನರು ಗಾಯಗೊಂಡರು ಎಂದು ವರದಿಗಳು ತಿಳಿಸಿವೆ.ಈ ಘಟನೆ ಸಂಭವಿಸಿದಾಗ, ಉಯ್ಯಾಲೆ ಮುರಿದು ಹಲವಾರು ಜನರು ಗಾಯಗೊಂಡರು. ಗಾಯಾಳುಗಳನ್ನು ರಕ್ಷಿಸಲು ಧಾವಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಬಳಿಕ ಪೊಲೀಸ್ ಇನ್ಸ್‌ಪೆಕ್ಟ‌ರ್ ಜಗದೀಶ್ ಪ್ರಸಾದ್ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಒಟ್ಟು 13 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ನಂತರ ಜಿಲ್ಲಾಧಿಕಾರಿ, ಪ್ರವಾಸೋದ್ಯಮ ವ್ಯವಸ್ಥಾಪಕ ನಿರ್ದೇಶಕರು ಮತ್ತು ಹಿರಿಯ ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಹೆಚ್ಚಿನ ಅನಾಹುತಗಳನ್ನು ತಡೆಗಟ್ಟಲು ಆ ಪ್ರದೇಶದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.
ಇನ್ನು ಘಟನೆ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ, ಘಟನೆಯ ತನಿಖೆಗಾಗಿ ಹೆಚ್ಚುವರಿ ಉಪ ಆಯುಕ್ತರ (ಎಡಿಸಿ) ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿಯನ್ನು ರಚಿಸಲಾಗಿದೆ. ತನಿಖೆಯ ಸಂಶೋಧನೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಘಟನೆಗೆ ಪ್ರತಿಕ್ರಿಯಿಸಿದ ಹರಿಯಾಣ ಮುಖ್ಯಮಂತ್ರಿ ನಯಾಬ್ ಸೈನಿ, ಫರಿದಾಬಾದ್‌ನಲ್ಲಿ ನಡೆದ ಸೂರಜ್‌ ಕುಂಡ್ ಮೇಳದ ಸಮಯದಲ್ಲಿ ಸಂಭವಿಸಿದ ಅಪಘಾತದಿಂದ ನನಗೆ ತೀವ ದುಃಖವಾಗಿದೆ. ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡ ವ್ಯಕ್ತಿಯ ಕುಟುಂಬಕ್ಕೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅದೇ ಸಮಯದಲ್ಲಿ, ಗಾಯಗೊಂಡ ವ್ಯಕ್ತಿಗಳಿಗೆ ಸೂಕ್ತ ಮತ್ತು ತಕ್ಷಣದ ಚಿಕಿತ್ಸೆಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಹರಿಯಾಣ ಸರ್ಕಾರವು ಗಾಯಾಳುಗಳು ಮತ್ತು ಅವರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.