ಮುಂಬೈ: ಇಂಗ್ಲೆಂಡ್ ಮತ್ತು ಐರ್ಲೆಂಡ್ ವಿರುದ್ಧ ಅವಳಿ ಟಿ20 ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಸೂರ್ಯ ಕುಮಾರ್ ಯಾದವ್ ಬದಲಿಗೆ ಶ್ರೇಯಸ್ ಅಯ್ಯರ್ ತಂಡವನ್ನು ಮುನ್ನೆಡೆಸಲಿದ್ದಾರೆ. ಐಪಿಎಲ್‌ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದ 15 ವರ್ಷದ ವೈಭವ್ ಸೂರ್ಯವಂಶಿಗೂ ಅವಕಾಶ ನೀಡಲಾಗಿದೆ.
15 ವರ್ಷ ಮತ್ತು 71 ದಿನಗಳ ವಯಸ್ಸಿನ ಸೂರ್ಯವಂಶಿ ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಭಾರತವು ಎರಡು ಟಿ-20 ಪಂದ್ಯಗಳನ್ನು ಆಡಲು (ಜೂನ್ 26 ಮತ್ತು 28) ಐರ್ಲೆಂಡ್‌ಗೆ ಪ್ರಯಾಣಿಸಲಿದೆ. ನಂತರ, ಜುಲೈ 1 ಮತ್ತು 11ರ ನಡುವೆ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿ ಆಡಲಿದೆ. 2023ರ ಡಿಸೆಂಬರ್ 3 ರಂದು ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದ ನಂತರ ಶ್ರೇಯಸ್ ಅಯ್ಯರ್ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಟಿ20 ತಂಡಕ್ಕೆ ಮರಳಿದ್ದಾರೆ.
ಐಪಿಎಲ್‌ನಲ್ಲಿ ಶ್ರೇಯಸ್ ಅಯ್ಯರ್ ಅವರ ಪ್ರಭಾವಶಾಲಿ ನಾಯಕತ್ವದ ಗುಣಗಳಿಂದಾಗಿ 2024ರಲ್ಲಿ ಕೆಕೆಆರ್ ತಂಡ ಪ್ರಶಸ್ತಿ ಗೆದ್ದಿತ್ತು. 2025ರಲ್ಲಿ ಪಂಜಾಬ್ ಕಿಂಗ್ಸ್ ಫೈನಲ್‌ಗೆ ತಲುಪಿತ್ತು. ಅಲ್ಲದೇ, ಎರಡೂ ಋತುಗಳಲ್ಲಿ ಬ್ಯಾಟಿಂಗ್‌ನಲ್ಲಿ ಸ್ಥಿರವಾದ ಪ್ರದರ್ಶನ ನೀಡಿದ್ದರಿಂದ ಆಯ್ಕೆಗಾರರು ಶ್ರೇಯಸ್ ಅವರನ್ನು ನಾಯಕನಾಗಿ ಆಯ್ಕೆ ಮಾಡಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟರ್ ತಿಲಕ್ ವರ್ಮಾ ಅವರಿಗೆ ಉಪನಾಯಕನ ಹೊಣೆ ನೀಡಲಾಗಿದೆ.
ಐರ್ಲೆಂಡ್ ಮತ್ತು ಇಂಗ್ಲೆಂಡ್ ಟಿ20 ಸರಣಿಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶಿವಂ ದುಬೆ, ತಿಲಕ್ ವರ್ಮಾ (ಉಪ ನಾಯಕ), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯಿ, ಮೊಹಮ್ಮದ್ ಸಿರಾಜ್,ಹರ್ಷಿತ್ ರಾಣಾ, ಆರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ
ಏಷ್ಯನ್ ಗೇಮ್ಸ್‌ಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶಿವಂ ದುಬೆ, ತಿಲಕ್ ವರ್ಮಾ (ವಿಸಿ), ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯಿ, ರಾಣಾ, ಅರ್ಷದೀಪ್ ಸಿಂಗ್, ಜಸ್‌ಪ್ರೀತ್ ಬುಮ್ರಾ, ವೈಭವ್ ಸೂರ್ಯವಂಶಿ