2026-03-07 06:32:05

T20 World Cup Kiwis get first win after losing five times | ಟಿ20 ವಿಶ್ವಕಪ್ ಐದು ಬಾರಿ ಸೋತಿರುವ ಕಿವೀಸ್‌ಗೆ ಸಿಗುತ್ತಾ ಮೊದಲ ಗೆಲುವು | Speed News Kannada

T20 World Cup Kiwis get first win after losing five times | ಟಿ20 ವಿಶ್ವಕಪ್ ಐದು ಬಾರಿ ಸೋತಿರುವ ಕಿವೀಸ್‌ಗೆ ಸಿಗುತ್ತಾ ಮೊದಲ ಗೆಲುವು | Speed News Kannada

ಕೋಲ್ಕತ್ತ: ಇಂದು (ಬುಧವಾರ) ನಡೆಯಲಿರುವ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಎರಡು ತಂಡಗಳಿಗೂ ನಿರ್ಣಾಯಕವಾಗಿದ್ದು, ಗೆಲ್ಲುವ ತಂಡವು ಫೈನಲ್ ಪ್ರವೇಶಿಸಲಿದೆ. ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಂಡಗಳು ಈವರೆಗೆ ಟಿ20 ವಿಶ್ವಕಪ್‌ನಲ್ಲಿ 5 ಬಾರಿ ಮುಖಾಮುಖಿಯಾಗಿವೆ. ಇದೀಗ 6ನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಎದುರಾಗಲು ವೇದಿಕೆ ಸಿದ್ಧವಾಗಿದೆ. ಎರಡು ತಂಡಗಳು ಕ್ರಮವಾಗಿ 2007, 2009, 2010, 2014 ಮತ್ತು 2026ರಲ್ಲಿ ಎದುರಾಗಿವೆ. ಈ ಎಲ್ಲಾ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಮೇಲುಗೈ ಸಾಧಿಸಿದೆ.
ಟಿ20 ವಿಶ್ವಕಪ್‌ನಲ್ಲಿ ಎರಡು ತಂಡಗಳ ಮುಖಾಮುಖಿ ಪಟ್ಟಿ ಹೀಗಿದೆ:
2007 ರಲ್ಲಿ ಇಂಗ್ಲೆಂಡಿನ ಡರ್ಬನ್‌ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾಗೆ 6 ವಿಕೆಟ್‌ ಗಳ ಗೆಲುವು.
2009 ರಲ್ಲಿ ಲಂಡನ್ನ ಲಾರ್ಡ್ಸ್ ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 1 ರನ್‌ಗಳ ರೋಚಕ ಗೆಲುವು.
2010 ರಲ್ಲಿ ಬಾರ್ಬಡೋಸ್‌ನ ಬ್ರಿಡ್ಜ್‌ ಟೌನ್‌ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 13 ರನ್‌ಗಳಿಂದ ಗೆಲುವು ಸಾಧಿಸಿದೆ.
2014 ರಲ್ಲಿ ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 2 ರನ್‌ಗಳಿಂದ ಗೆಲುವು ಸಾಧಿಸಿದೆ.
ಈ ಬಾರಿಯ ವಿಶ್ವಕಪ್‌ನ ಲೀಗ್‌ನಲ್ಲಿ ಕೂಡ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಇಲ್ಲಿಯೂ ದಕ್ಷಿಣ ಆಫ್ರಿಕಾ ತಂಡ 7 ವಿಕೆಟ್‌ಗಳ ಗೆಲುವು ಸಾಧಿಸಿದೆ. ಟಿ20 ವಿಶ್ವಕಪ್‌ನಲ್ಲಿ ಭಾರತ vs ಇಂಗ್ಲೆಂಡ್ 5 ಬಾರಿ ಮಖಾಮುಖಿ; ಯಾರಿಗೆ ಮೇಲುಗೈ?
ಪ್ರಸ್ತುತ ಮತ್ತೊಮ್ಮೆ ಈಡನ್ ಗಾರ್ಡನ್ಸ್‌ನಲ್ಲಿ 2026ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದವರು ಫೈನಲ್ ತಲುಪಲಿದ್ದಾರೆ. ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಂಡಗಳು ಈವರೆಗೆ 19 ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ದಕ್ಷಿಣ ಆಫ್ರಿಕಾ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ನ್ಯೂಜಿಲೆಂಡ್ 7 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.