ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಡಿಐಜಿ ಮತ್ತು ಐಜಿಪಿ ಡಾ. ಎಂ.ಎ ಸಲೀಂ ಮತ್ತು ಇತರ ಐಪಿಎಸ್ ಅಧಿಕಾರಿಗಳೊಂದಿಗೆ ಗೃಹ ಇಲಾಖೆಯ ಕುರಿತು ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಔಪಚಾರಿಕ ಸಭೆ ನಡೆಸಿದರು.ಈ ಸಂದರ್ಭದಲ್ಲಿ ಅವರು ಇಲಾಖೆಯ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ರಾಜ್ಯದ ಅಪರಾಧ ಪ್ರಕರಣಗಳು, ಸಿಬ್ಬಂದಿ ನೇಮಕಾತಿ, ಕಾನೂನು ಸುವ್ಯವಸ್ಥೆ, ಮಾದಕವಸ್ತುಗಳ ನಿಯಂತ್ರಣ ಮುಂತಾದ ವಿಷಯಗಳ ಕುರಿತಂತೆ ವಿಸ್ತೃತ ಚರ್ಚೆ ನಡೆಸಿದರು.
ಪೊಲೀಸ್ ಮಹಾನಿರ್ದೇಶಕರ ವ್ಯಾಪ್ತಿಯಲ್ಲಿ ಬರುವ 6 ಕಮೀಷನರೇಟ್‌ಗಳ ಸ್ಥಿತಿಗತಿಗಳ ಕುರಿತು ಚರ್ಚಿಸಿ, ಸಾಂವಿಧಾನಿಕ ಚೌಕಟ್ಟನ್ನು ಮೀರುವ ಯಾವುದೇ ವ್ಯಕ್ತಿ ಮತ್ತು ಯಾವುದೇ ಪ್ರಕರಣಗಳ ವಿರುದ್ಧ ರಾಜಿ ಇಲ್ಲದೆ ಕ್ರಮ ಜರುಗಿಸಬೇಕು, ಸರ್ಕಾರಕ್ಕೆ ಮುಜುಗರವಾಗುವಂತಹ ನಡವಳಿಕೆಗಳನ್ನು ಸಹಿಸುವುದಿಲ್ಲ ಎಂದು ಸಚಿವರು ತಿಳಿಸಿದರು.
ಕಮೀಷನರೇಟ್ ವ್ಯಾಪ್ತಿಯಲ್ಲಿನ 16 ಯೂನಿಟ್‌ಗಳ ಸ್ಥಿತಿಗತಿಗಳ ಕುರಿತು ಪ್ರತಿ ದಿನ 3 ಯೂನಿಟ್‌ಗಳ ವಸ್ತುಸ್ಥಿತಿ ಪರಿಶೀಲನೆ ಮಾಡಿ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು.