2026-03-07 01:59:44

Tamannaah Bhatia Is The Brand Ambassador For Mysore Sandal Soap | ಮೈಸೂರು ಸ್ಯಾಂಡಲ್ ಸೋಪ್ ಗೆ ಖ್ಯಾತ ನಟಿ ತಮನ್ನಾ ಭಾಟಿಯಾ ಪ್ರಚಾರ ರಾಯಭಾರಿ | Speed News Kannada

Tamannaah Bhatia Is The Brand Ambassador For Mysore Sandal Soap | ಮೈಸೂರು ಸ್ಯಾಂಡಲ್ ಸೋಪ್ ಗೆ ಖ್ಯಾತ ನಟಿ ತಮನ್ನಾ ಭಾಟಿಯಾ ಪ್ರಚಾರ ರಾಯಭಾರಿ | Speed News Kannada

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ಗೆ ಖ್ಯಾತ ನಟಿ ತಮನ್ನಾ ಭಾಟಿಯಾ ಪ್ರಚಾರ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಇವರನ್ನು  ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ.  ಇಂದು ಭಾಟಿಯಾ ಅವರು ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪನ್ನು ಬಿಡುಗಡೆ ಮಾಡಲಿದ್ದಾರೆ. 
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಮಾತನಾಡಿ, ಕೆಎಸ್‌ಡಿಎಲ್‌ ಸಂಸ್ಥೆಯ ವಾರ್ಷಿಕ ವಹಿವಾಟನ್ನು 2030 ರ ವೇಳೆಗೆ 5,000 ಕೋಟಿ ರೂ. ಗಳಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಇದಕ್ಕೆ ಪೂರಕವಾಗಿ ಯುವಜನಾಂಗವನ್ನು ತಲುಪಲು ಸಾಮಾಜಿಕ ಜಾಲತಾಣಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ ಹೊಂದಿರುವ ನಟಿ ತಮನ್ನಾ ಅವರನ್ನು ನೇಮಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮೈಸೂರು ಸ್ಯಾಂಡಲ್ ಸೋಪಿನಿಂದ ಹಿಡಿದು ಕುಡಿಯುವ ನೀರಿನವರೆಗೂ ಸೇರಿ 57 ಉತ್ಕೃಷ್ಟ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ತಮನ್ನಾ ಅವರು ಕೆಎಸ್‌ಡಿಎಲ್‌ ಉತ್ಪನ್ನಗಳ ಪ್ರಸಾರ ಜಾಹೀರಾತು, ಕಾರ್ಯಕ್ರಮ ಇತ್ಯಾದಿಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದರು.
ವಿಜಯಪುರ ಮತ್ತು ದಾಬಸ್‌ ಪೇಟೆ ಕೈಗಾರಿಕಾ ಪ್ರದೇಶಗಳಲ್ಲಿ ಸಂಸ್ಥೆಯ ಉತ್ಪಾದನಾ ಘಟಕಗಳನ್ನು ಸದ್ಯದಲ್ಲೇ ಆರಂಭಿಸಲಾಗುವುದು. ಜೊತೆಗೆ ಈಗ 25-30 ಕೋಟಿ ರೂ. ಆಸುಪಾಸಿನಲ್ಲಿರುವ ರಫ್ತು ವಹಿವಾಟನ್ನು ಮುಂದಿನ ದಿನಗಳಲ್ಲಿ ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕೆಎಸ್‌ಡಿಎಲ್ ಸಂಸ್ಥೆಯ ಅಧ್ಯಕ್ಷರೂ ಆದ ಶಾಸಕ ಸಿ.ಎಸ್ ಅಪ್ಪಾಜಿ ನಾಡಗೌಡ ಮಾತನಾಡಿ, ಹೊಸ ಯಂತ್ರಗಳನ್ನು ಖರೀದಿಸದೆ, ಹಳೆಯ ಯಂತ್ರೋಕರಣಗಳನ್ನು ಬಳಸಿಕೊಂಡೇ ಸಂಸ್ಥೆಯಲ್ಲಿ ಉತ್ಪಾದನಾ ಕೆಲಸ ನಡೆಯುತ್ತಿದೆ. ಇದಕ್ಕಾಗಿ ಕಟ್ಟುನಿಟ್ಟಾಗಿ ದಿನಕ್ಕೆ ಮೂರು ಪಾಳಿಯ ಕೆಲಸದ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ ಎಂದಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.