2026-06-08 01:33:38

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ; ಕಾಂಗ್ರೆಸ್‌ನ 6 ದಶಕಗಳ ವರ್ಷಗಳ ವನವಾಸ ಅಂತ್ಯ |Speed News Kannada

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ; ಕಾಂಗ್ರೆಸ್‌ನ 6 ದಶಕಗಳ ವರ್ಷಗಳ ವನವಾಸ ಅಂತ್ಯ |Speed News Kannada

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, 23 ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ 23 ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು.

ಕಾಂಗ್ರೆಸ್‌ನ 6 ದಶಕಗಳ ವರ್ಷಗಳ ವನವಾಸ ಅಂತ್ಯ;

 ಈ ಸಂಪುಟ ವಿಸ್ತರಣೆಯ ವಿಶೇಷ ಎಂದರೆ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷದ 59 ವರ್ಷಗಳ ಸುದೀರ್ಘ ವನವಾಸ ಅಂತ್ಯಗೊಂಡಿದೆ. 59 ವರ್ಷಗಳ ನಂತರ ಕಾಂಗ್ರೆಸ್ ತಮಿಳುನಾಡಿನಲ್ಲಿ ಸರ್ಕಾರದ ಭಾಗವಾಗಿದೆ. ಕಾಂಗ್ರೆಸ್‌ನ 5 ಶಾಸಕರಲ್ಲಿ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ.

ಟಿವಿಕೆಯ ಮತ್ತೊಂದು ಮೈತ್ರಿಪಕ್ಷವಾದ ವಿಸಿಕೆಯ ಇಬ್ಬರು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. ಮತ್ತೊಂದು ಮಿತ್ರಪಕ್ಷವಾದ ಐಯುಎಂಎಲ್ ಕೂಡ ಸರ್ಕಾರ ಸೇರಲು ನಿರ್ಧರಿಸಿದೆ. ಆದರೆ ತನ್ನ ಇಬ್ಬರು ಶಾಸಕರಲ್ಲಿ ಯಾರನ್ನು ಸಚಿವರನ್ನಾಗಿ ಮಾಡಬೇಕು ಎಂಬ ಗೊಂದಲ ಬಗೆಹರಿಯದ ಕಾರಣ ದೂರ ಉಳಿದಿದೆ.

ಇತ್ತೀಚಿನ ಚುನಾವಣೆಯಲ್ಲಿ ಸಿಎಂ ವಿಜಯ್ ಅವರ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆದ್ದಿತ್ತು. ಆದರೆ, ಬಹುಮತಕ್ಕೆ 118 ಶಾಸಕರ ಅಗತ್ಯವಿತ್ತು. ಹೀಗಾಗಿ ವಿಜಯ್ ಅವರು ಕಾಂಗ್ರೆಸ್, ಸಿಪಿಐ, ಸಿಪಿಐಎಂ ಮತ್ತು ಐಯುಎಂಎಲ್ ಬೆಂಬಲದೊಂದಿಗೆ ಮೈತ್ರಿ ಸರ್ಕಾರ ರಚಿಸಿದ್ದಾರೆ. ಜತೆಗೆ ಎಐಎಡಿಎಂಕೆ ಪಕ್ಷದ 24 ಬಂಡಾಯ ಶಾಸಕರು ವಿಜಯ್ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿ 144 ಶಾಸಕರ ಬೆಂಬಲ ವಿಜಯ್‌ ಅವರಿಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.