2026-05-06 05:15:41

tamilnadu; congress join hands with tvk| ತಮಿಳುನಾಡು: ಡಿಎಂಕೆ ಮೈತ್ರಿ ಕಡಿದುಕೊಂಡು ಟಿವಿಕೆ ಕೈ ಹಿಡಿದ ಕಾಂಗ್ರೆಸ್‌| Speed News Kannada

tamilnadu; congress join hands with tvk| ತಮಿಳುನಾಡು: ಡಿಎಂಕೆ ಮೈತ್ರಿ ಕಡಿದುಕೊಂಡು ಟಿವಿಕೆ ಕೈ ಹಿಡಿದ ಕಾಂಗ್ರೆಸ್‌| Speed News Kannada

ಚೆನ್ನೈ: ಡಿಎಂಕೆ ಸಂಬಂಧವನ್ನು ಕಡಿದುಕೊಂಡಿರುವ ಕಾಂಗ್ರೆಸ್‌, ಭರ್ಜರಿ ಜಯ ಸಾಧಿಸಿರುವ  ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಅಧಿಕೃತವಾಗಿ ಘೋಷಿಸಿದೆ. ಆ ಮೂಲಕ ಡಿಎಂಕೆಯೊಂದಿಗಿನ ದೀರ್ಘಕಾಲದ ಮೈತ್ರಿಯನ್ನು ಕಡಿದುಕೊಂಡಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಗಿರೀಶ್ ಚೋಡಂಕರ್, ಭಾರತದ ಸಂವಿಧಾನದಲ್ಲಿ ನಂಬಿಕೆಯಿಲ್ಲದ ಕೋಮು ಶಕ್ತಿಗಳನ್ನು ಈ ಮೈತ್ರಿಯಿಂದ ಹೊರಗಿಡುವ ಷರತ್ತಿನ ಮೇಲೆ ಮೈತ್ರಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

‘ಟಿವಿಕೆ ಮುಖ್ಯಸ್ಥ ವಿಜಯ್ ಅವರು ಸರ್ಕಾರ ರಚಿಸಲು ಬೆಂಬಲ ನೀಡುವಂತೆ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಮನವಿ ಸಲ್ಲಿಸಿದ್ದರು. ಕಾಂಗ್ರೆಸ್‌ ಜಾತ್ಯತೀತ, ಪ್ರಗತಿಪರ ಸಿದ್ದಾಂತದ ಮೇಲೆ ನಂಬಿಕೆ ಇಟ್ಟಿರುವ ಪಕ್ಷವಾಗಿದೆ. ತಮಿಳುನಾಡಿನ ಜನರ ತೀರ್ಪನ್ನು ಗೌರವಿಸುವುದು, ಎತ್ತಿಹಿಡಿಯುವುದು ನಮ್ಮ ಸಾಂವಿಧಾನಿಕ ಕರ್ತವ್ಯವಾಗಿದೆ. ಕಾಂಗ್ರೆಸ್ ತಮಿಳುನಾಡು ಘಟಕ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷವು (ಸಿಎಲ್‌ಪಿ) ಸರ್ಕಾರ ರಚಿಸಲು ಟಿವಿಕೆಗೆ ಪೂರ್ಣ ಬೆಂಬಲ ನೀಡಲು ನಿರ್ಧರಿಸಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

‘ಟಿವಿಕೆ ಮತ್ತು ಕಾಂಗ್ರೆಸ್ ನಡುವಿನ ಈ ಮೈತ್ರಿಯು ಪೆರಿಯಾರ್ ಅವರ ಸಾಮಾಜಿಕ ನ್ಯಾಯದ ಆದರ್ಶಗಳು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಂವಿಧಾನಿಕ ಆದರ್ಶಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸಲಿದ್ದುದೆ. ಮುಂದಿನ ವರ್ಷಗಳಲ್ಲಿ ತಮಿಳುನಾಡಿನಲ್ಲಿ ಕಾಮರಾಜರ್ ಅವರ ಸುವರ್ಣ ದಿನಗಳನ್ನು ಮರಳಿ ತರಲು ಶ್ರಮಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಮೈತ್ರಿಯು ಕೇವಲ ಸರ್ಕಾರ ರಚನೆಗೆ ಮಾತ್ರ ಸೀಮಿತವಾಗಿರದೆ, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ಲೋಕಸಭೆ ಮತ್ತು ರಾಜ್ಯಸಭೆ ಚುನಾವಣೆಗಳಿಗೂ ಮುಂದುವರಿಯಲಿದೆ ಎಂದು ಕಾಂಗ್ರೆಸ್‌ ತಿಳಿಸಿದೆ‌.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.