2026-05-06 07:23:07

tamilnadu; no majority to tvk, no oath taking tomorrow|ತಮಿಳುನಾಡು: ಸಂಖ್ಯಾಬಲ ಕೊರತೆ; ನಾಳೆ ವಿಜಯ್‌ ಪ್ರಮಾಣವಚನ ಸ್ವೀಕಾರ ಇಲ್ಲ| Speed News Kannada

tamilnadu; no majority to tvk, no oath taking tomorrow|ತಮಿಳುನಾಡು: ಸಂಖ್ಯಾಬಲ ಕೊರತೆ; ನಾಳೆ ವಿಜಯ್‌ ಪ್ರಮಾಣವಚನ ಸ್ವೀಕಾರ ಇಲ್ಲ| Speed News Kannada

ಚೆನ್ನೈ: ತಮಿಳುನಾಡಿನಲ್ಲಿ ನೂತನ ಸರ್ಕಾರ ರಚಿಸಲು ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ಹಕ್ಕು ಮಂಡಿಸಿದೆ.

ಇಂದು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿದ ಟಿವಿಕೆ ಮುಖ್ಯಸ್ಥ ನಿಯೋಜಿತ ಮುಖ್ಯಮಂತ್ರಿ ವಿಜಯ್‌ ಅವರು ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ನಾಳೆ(ಗುರುವಾರ) ನೆಹರೂ ಕ್ರೀಡಾಂಗಣದಲ್ಲಿ ಪ್ರಮಾಣವಚನ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಆದರೆ ವಿಜಯ್‌ ಅವರು ಸರ್ಕಾರ ರಚಿಸಲು ಬೇಕಾದ 120 ಸದಸ್ಯರ ಸಂಖ್ಯಾಬಲವನ್ನು ರಾಜ್ಯಪಾಲರ ಮುಂದೆ ಮಂಡಿಸಲು ಸಾಧ್ಯವಾಗಿಲ್ಲ. ಮೌಖಿಕವಾಗಿ 120 ಸದಸ್ಯರು ಟಿವಿಕೆ ಪರವಾಗಿ ಇದ್ದಾರೆ ಎಂದು ಹೇಳಿದರಾದರೂ ರಾಜ್ಯಪಾಲರು ಒಪ್ಪಿಕೊಂಡಿಲ್ಲ ಎಂದು ಲೋಕಭವನದ ಮೂಲಗಳು ತಿಳಿಸಿವೆ. ಹಾಗಾಗಿ ನಾಳೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳಲ್ಲಿ ಗೆಲವು ಸಾಧಿಸಿದೆ. ಡಿಎಂಕೆ 59, ಎಐಎಡಿಎಂಕೆ 47, ಕಾಂಗ್ರೆಸ್ 5, ಪಿಎಂಕೆ 4, ಐಯುಎಂಎಲ್ 2, ಸಿಪಿಐ 2, ಸಿಪಿಐ(ಎಂ) 2 ಹಾಗೂ ವಿಸಿಕೆ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ಪಕ್ಷಗಳು ತಲಾ 1 ಸ್ಥಾನ ಪಡೆದುಕೊಂಡಿವೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.