2026-05-15 08:38:00

tanker hit tractor from backside;6 died, many serious| ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ; ಆರು ಮಂದಿ ಸಾವು; ಹಲವರ ಸ್ಥಿತಿ ಗಂಭೀರ|Speed News Kannada

tanker hit tractor from backside;6 died, many serious| ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ; ಆರು ಮಂದಿ ಸಾವು; ಹಲವರ ಸ್ಥಿತಿ ಗಂಭೀರ|Speed News Kannada

ಮುನಿರಾಬಾದ್: ವೇಗವಾಗಿ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದು, ಒಂದು ಸಣ್ಣ ಮಗು ಸೇರಿದಂತೆ ಆರು ಮಂದಿ ಮೃತಪಟ್ಟಿರುವ ದುರಂತ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ಇಂದು ನಡೆದಿದೆ. ಈ ಅವಘಡದಲ್ಲಿ 9 ಮಂದಿ ಗಾಯಗೊಂಡಿದ್ದಾರೆ.

ಮೃತರು ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಇವರೆಲ್ಲರೂ ಕೊಪ್ಪಳದ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಬವಿಸಿದೆ. ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಬದುಕುಳಿದವರ ಆಕ್ರಂದನ ಮುಗಿಲು ಮುಟ್ಟಿತ್ತು.

ದೇವಿಯ ದರ್ಶನ ಪಡೆದು ಧನ್ಯರಾಗಬೇಕೆಂದು ಹೊರಟಿದ್ದ ಭಕ್ತರು ಬಾರದ ಲೋಕ ಸೇರಿದ್ದಾರೆ. ಕೆಲವು ಗಾಯಾಳುಗಳ ಸ್ಥಿತಿ ಕೂಡ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮುನಿರಾಬಾದ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ರಕ್ಷಣಾ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಇವರು ನಜ್ಜುಗುಜ್ಜಾಗಿದ್ದ ಟ್ರ್ಯಾಕ್ಟರ್‌ನ ಭಾಗಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.ಗಂಭೀರವಾಗಿ ಗಾಯಗೊಂಡ ಹತ್ತು ಮಂದಿಯನ್ನು ಕೂಡಲೇ ಹೊಸಪೇಟೆ ಸರ್ಕಾರಿ ಆಸ್ಪತ್ರೆ ಮತ್ತು ಕೊಪ್ಪಳದ ಜಿಲ್ಲಾ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.

ಡಿಕ್ಕಿ ಹೊಡೆದ ಟ್ಯಾಂಕರ್ ಚಾಲಕ ಪರಾರಿಯಾಗಿದ್ದು ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.