2026-03-07 05:16:25

Tariq sworn in as new Bangladesh PM | ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ಪ್ರಮಾಣ ಸ್ಪೀಕರ್‌ ಓಂ ಬಿರ್ಲಾ ಭಾಗಿ | Speed News Kannada

Tariq sworn in as new Bangladesh PM | ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ಪ್ರಮಾಣ ಸ್ಪೀಕರ್‌ ಓಂ ಬಿರ್ಲಾ ಭಾಗಿ | Speed News Kannada

ಢಾಕಾ: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯ (ಬಿಎನ್‌ಪಿ) ಅಧ್ಯಕ್ಷ ತಾರಿಕ್ ರೆಹಮಾನ್ ಅವರು ನೂತನ ಪ್ರಧಾನಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. 35 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪುರುಷರೊಬ್ಬರು ಬಾಂಗ್ಲಾದೇಶದ ಪ್ರಧಾನಿಯಾಗಿದ್ದಾರೆ.
ಅಧ್ಯಕ್ಷರ ಭವನ ಬಂಗಾಬಾನ್ ಬದಲಿಗೆ ಸಂಸತ್ ಭವನದ ದಕ್ಷಿಣ ಪ್ಲಾಜಾದಲ್ಲಿ 60 ವರ್ಷದ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಿದರು. ದೇಶದ ಅಧ್ಯಕ್ಷ ಮೊಹಮ್ಮದ್‌ ಶಹಾಬುದ್ದೀನ್ ಅವರು ನೂತನ ಸಚಿವ ಸಂಪುಟದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಸಮಾರಂಭದಲ್ಲಿ ಭಾರತದ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾಗವಹಿಸಿದ್ದರು.
ಇಂದು ಬೆಳಿಗ್ಗೆ 11.30ಕ್ಕೆ ಸಂಸತ್ ಭವನದಲ್ಲಿ ಬಿಎನ್‌ಪಿ ಸಂಸದೀಯ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಪ್ರಧಾನಿಯಾಗಿ ಆಯ್ಕೆ ಮಾಡಲಾಯಿತು  ಎಂದು ಪಕ್ಷದ ಸ್ಥಾಯಿ ಸಮಿತಿ ಸದಸ್ಯ ಸಲಾಹುದ್ದೀನ್‌ ಅಹ್ಮದ್‌ ತಿಳಿಸಿದರು.
ಫೆಬ್ರುವರಿ 12ರಂದು ನಡೆದಸಾರ್ವತ್ರಿಕ 13ನೇ ಸಂಸತ್ ಚುನಾವಣೆಯಲ್ಲಿ ತಾರಿಕ್‌ ರೆಹಮಾನ್‌ ಅವರ ನೇತೃತ್ವದ ಬಾಂಗ್ಲಾದೇಶದ ನ್ಯಾಷನಲಿಸ್ಟ್‌ ಪಾರ್ಟಿ (ಬಿಎನ್‌ಪಿ) 297 ಸ್ಥಾನಗಳಲ್ಲಿ 212 ಸ್ಥಾನಗಳನ್ನು ಗೆದ್ದುಕೊಂಡಿತ್ತು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.