2026-06-25 02:34:19

tcs corporate jihad, main suspect nida khan arrested| ಟಿಸಿಎಸ್‌ ಕಾರ್ಪೋರೇಟ್ ಜಿಹಾದ್: ಪ್ರಮುಖ ಆರೋಪಿ ನಿದಾಖಾನ್‌ ಬಂಧನ| Speed News Kannada

tcs corporate jihad, main suspect nida khan arrested| ಟಿಸಿಎಸ್‌ ಕಾರ್ಪೋರೇಟ್ ಜಿಹಾದ್: ಪ್ರಮುಖ ಆರೋಪಿ ನಿದಾಖಾನ್‌ ಬಂಧನ| Speed News Kannada

ಪುಣೆ: ಮಹಾರಾಷ್ಟ್ರದ ನಾಸಿಕ್‌ ನ ಟಿಸಿಎಸ್ ಸಂಸ್ಥೆಯಲ್ಲಿ ನಡೆದಿದ್ದ ಕಾರ್ಪೋರೇಟ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನಿದಾಖಾನ್ ಎಂಬಾಕೆಯನ್ನು ವಶಕ್ಕೆ ಪಡೆಯುವಲ್ಲಿ ಮಹಾರಾಷ್ಟ್ರ ಪೊಲೀಸರು ಯಶಸ್ವಿಯಾಗಿದ್ದಾರೆ.

ಟಿಸಿಎಸ್ ಕಚೇರಿಯಲ್ಲಿನ ಕಿರುಕುಳ ಮತ್ತು ಧಾರ್ಮಿಕ ಮತಾಂತರ ಆರೋಪಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈಕೆಯನ್ನು ಬಂಧಿಸಲಾಗಿದೆ. ಹಲವು ವಾರಗಳಿಂದ ಪರಾರಿಯಾಗಿದ್ದ ನಿದಾ ಖಾನ್ ಅವರನ್ನು ಛತ್ರಪತಿ ಸಂಭಾಜಿನಗರದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಕೆಯ ವಿರುದ್ಧ ಟಿಸಿಎಸ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಹಾಗೂ ಧಾರ್ಮಿಕ ಮತಾಂತರಕ್ಕೆ ಪ್ರೇರೇಪಿಸಿದ ಆರೋಪಗಳು ಕೇಳಿಬಂದಿದ್ದವು. ನಂತರ ಟಿಸಿಎಸ್ ಸಂಸ್ಥೆ ನಿದಾ ಖಾನ್ ಅವರನ್ನು ಅಮಾನತುಗೊಳಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಎಫ್‌ಐಆರ್‌ಗಳು ದಾಖಲಾಗಿದ್ದು, ಇತರ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ.

ಆಧುನಿಕ ತಂತ್ರಜ್ಞಾನ ಬಳಸಿ ನಿದಾ ಖಾನ್ ಅಡಗಿಕೊಂಡಿದ್ದ ಸ್ಥಳವನ್ನು ಪತ್ತೆಹಚ್ಚಿ ಬಂಧಿಸಲಾಗಿದೆ. ನಂತರ ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ತನಿಖೆಗಾಗಿ ನಾಸಿಕ್‌ಗೆ ಕರೆದೊಯ್ಯಲಾಗಿದೆ.

ನಿದಾ ಖಾನ್‌  ಮಹಿಳಾ ಉದ್ಯೋಗಿಗಳ ಬಲವಂತದ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದರು. ಸಂತ್ರಸ್ಥೆಯರು ದೂರು ನೀಡದಂತೆ ಆಕೆ ತಡೆದಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ನ್ಯಾಯಾಲಯವು ನಿದಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ಎಂಟು ಮಂದಿಯನ್ನು ಬಂಧಿಸಲಾಗಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.