2026-06-08 01:30:53

Tehran has killed 503 people so far injured more than 5700 | ಮಧ್ಯಪ್ರಾಚ್ಯ ಸಂಘರ್ಷ ಟೆಹ್ರಾನ್‌ನಲ್ಲಿ ಈವರೆಗೆ 503 ಮಂದಿ ಮೃತ್ಯು 5700ಕ್ಕೂ ಹೆಚ್ಚು ಜನರಿಗೆ ಗಾಯ | Speed News Kannada

Tehran has killed 503 people so far injured more than 5700 | ಮಧ್ಯಪ್ರಾಚ್ಯ ಸಂಘರ್ಷ ಟೆಹ್ರಾನ್‌ನಲ್ಲಿ ಈವರೆಗೆ 503 ಮಂದಿ ಮೃತ್ಯು 5700ಕ್ಕೂ ಹೆಚ್ಚು ಜನರಿಗೆ ಗಾಯ | Speed News Kannada

ಟೆಹ್ರಾನ್: ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಸಾರಿರುವ ಯುದ್ಧದಲ್ಲಿ ಇರಾನ್‌ ಟೆಹ್ರಾನ್ ಪ್ರಾಂತ್ಯದಲ್ಲಿ ಈವರೆಗೆ 500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕೃತ ಮಾಹಿತಿಯನ್ನು ಉಲ್ಲೇಖಿಸಿ Aljazeera ವರದಿ ಮಾಡಿದೆ.
ಇರಾನ್‌ ಟೆಹ್ರಾನ್ ಪ್ರಾಂತ್ಯದ ತುರ್ತು ವೈದ್ಯಕೀಯ ಸೇವೆಗಳ (EMS) ಮುಖ್ಯಸ್ಥ ಮುಹಮ್ಮದ್ ಇಸ್ಮಾಯಿಲ್ ತವಕೋಲಿ ಅವರನ್ನು ಉಲ್ಲೇಖಿಸಿ ಮೆಹರ್ ಸುದ್ದಿ ಸಂಸ್ಥೆ ವರದಿ ಮಾಡಿರುವಂತೆ, ಯುದ್ಧ ಆರಂಭವಾದ ಬಳಿಕ ಈ ಪ್ರಾಂತ್ಯದಲ್ಲಿ ಒಟ್ಟು 503 ಮಂದಿ ಮೃತಪಟ್ಟಿದ್ದಾರೆ ಎಂದು Aljazeera ವರದಿ ಮಾಡಿದೆ.
ಫೆ.28ರಿಂದ ಈವರೆಗೆ ಟೆಹ್ರಾನ್ ಪ್ರಾಂತ್ಯದಲ್ಲಿ ಸುಮಾರು 5,700 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ದಾಳಿಗಳ ಪರಿಣಾಮವಾಗಿ ಪ್ರಾಂತ್ಯದ ವಿವಿಧ ಭಾಗಗಳಲ್ಲಿ ಭಾರೀ ಹಾನಿ ಉಂಟಾಗಿದೆ. ರಕ್ಷಣಾ ಮತ್ತು ವೈದ್ಯಕೀಯ ಸೇವೆಗಳು ತೀವ್ರ ಒತ್ತಡಕ್ಕೆ ಒಳಗಾಗಿವೆ. ಪರಿಸ್ಥಿತಿ ಉದ್ವಿಗ್ನವಾಗಿಯೇ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.