2026-03-07 07:24:12

Telugu YouTuber Bonu Komali commits suicide | ತೆಲುಗಿನ ಯೂಟ್ಯೂಬರ್‌ ಬೋನು ಕೋಮಲಿ ಆತ್ಮಹತ್ಯೆ ಕಾರಣ ನಿಗೂಢ | Speed News Kannaada

Telugu YouTuber Bonu Komali commits suicide | ತೆಲುಗಿನ ಯೂಟ್ಯೂಬರ್‌ ಬೋನು ಕೋಮಲಿ ಆತ್ಮಹತ್ಯೆ ಕಾರಣ ನಿಗೂಢ | Speed News Kannaada

ಹೈದರಾಬಾದ್:‌ ಆಂಧ್ರಪ್ರದೇಶದ ಖ್ಯಾತ ಯೂಟ್ಯೂಬರ್‌ ಬೋನು ಕೋಮಲಿ ಆತ್ಮಹತ್ಯೆಗೆ ಶರಾಣಾಗಿದ್ದಾರೆ. ಬಿಎಸ್‌ ಸಿ ಓದುತ್ತಿದ್ದ ಕೋಮಲಿ ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. 
ಕೋಮಲಿ ಹೈದರಾಬಾದ್‌ನಲ್ಲಿ11 ತಿಂಗಳಿನಿಂದ ಅಪಾರ್ಟ್‌ಮೆಂಟ್‌ ವೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ತಮ್ಮ ಜೀವನಶೈಲಿ ಕುರಿತು ಯೂಟ್ಯೂಬ್‌ನಲ್ಲಿ ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದರು. ಇದಕ್ಕಾಗಿಯೇ ಅವರು ಪ್ರಸಿದ್ಧಿಹೊಂದಿದ್ದರು.
ಕೋಮಲಿ ಸೋಮವಾರ ಮುಂಜಾನೆ ಕುವೈತ್‌ ನಲ್ಲಿ ಕೆಲಸ ಮಾಡುತ್ತಿರುವ ತಮ್ಮ ತಾಯಿ ಸತ್ಯ ವರಲಕ್ಷ್ಮಿ ಅವರಿಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ  'ಐ ಲವ್ ಯು ಸೋ ಮಚ್ ಅಮ್ಮ, ತಮ್ಮನನ್ನು ಚೆನ್ನಾಗಿ ನೋಡಿಕೋ ಎಂದು ಸಂದೇಶ ಕಳುಹಿಸಿದ್ದಾರೆ. ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅತ್ತ ತಾಯಿ ಸತತವಾಗಿ ಕರೆ ಮಾಡಿದರೂ ಆಕೆ ಸ್ವೀಕರಿಸಿಲ್ಲ. ಗಾಬರಿಗೊಂಡ ತಾಯಿ, ತಕ್ಷಣವೇ ಕೋಮಲಿಯ ಸ್ನೇಹಿತರೊಬ್ಬರಿಗೆ ಕರೆ ಮಾಡಿ ಫ್ಲಾಟ್ ಗೆ ಹೋಗಿ ನೋಡುವಂತೆ ತಿಳಿಸಿದ್ದಾರೆ.
ಸ್ನೇಹಿತೆಯು ಮಧ್ಯಾಹ್ನ 3 ಗಂಟೆ ವೇಳೆಗೆ ಫ್ಲಾಟ್‌ಗೆ ಹೋಗಿ ಎಷ್ಟೇ ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಬಂದಿಲ್ಲ. ಕೊನೆಗೆ ಬಾಗಿಲು ಒಡೆದು ನೋಡಿದಾಗ, ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹದ ಪತ್ತೆಯಾಗಿದೆ. ಇದಕ್ಕೂ ಮೊದಲು ಕೋಮಲಿ ಅವರು ಸುಮಾರು 6 ತಿಂಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇವರ ಸಾವಿನ ಕಾರಣ ಮಾತ್ರ ನಿಗೂಢವಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.