2026-07-23 07:33:50

Temperatures continue to rise in the state for another week | ರಾಜ್ಯದಲ್ಲಿ ಇನ್ನೂ ಒಂದು ವಾರ ತಾಪಮಾನ ಹೆಚ್ಚಳ ಮುಂದುವರಿಕೆ ಹವಾಮಾನ ಇಲಾಖೆ ಮುನ್ಸೂಚನೆ | Speed News Kannada

Temperatures continue to rise in the state for another week | ರಾಜ್ಯದಲ್ಲಿ ಇನ್ನೂ ಒಂದು ವಾರ ತಾಪಮಾನ ಹೆಚ್ಚಳ ಮುಂದುವರಿಕೆ ಹವಾಮಾನ ಇಲಾಖೆ ಮುನ್ಸೂಚನೆ | Speed News Kannada

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಆಗುತ್ತಿದ್ದು ಇನ್ನೂ ಹಲವು ಕಡೆ ವಿಪರೀತ ಬಿಸಿಲಿನ ತಾಪಮಾನ ಏರಿಕೆಯಾಗಿದೆ. ಅಲ್ಲದೇ ರಾಜ್ಯಾದ್ಯಂತ ಇನ್ನೂ ಒಂದು ವಾರ ತಾಪಮಾನ ಏರಿಕೆ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೌದು ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಬಿಸಿಲ ಬೇಗೆಗೆ ಜನರು ಬಳಲಿ ಬೆಂಡಾಗಿದ್ದು, ರಾಯಚೂರು ಹಾಗೂ ಕಲಬುರಗಿಯಲ್ಲಿ ಉಷ್ಣಾಂಶ 41 ಡಿಗ್ರಿ ತಲುಪಿದೆ. ಇನ್ನು ಬೆಂಗಳೂರಿನಲ್ಲಿ 36 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಮುಂದಿನ ಒಂದು ವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 40-42 ಡಿಗ್ರಿ ಉಷ್ಣಾಂಶ ದಾಖಲಾಗುವ ಸಾಧ್ಯತೆ ಅಧಿಕವಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತಾಪಮಾನ ಏರಿಕೆಯಾಗುತ್ತಲೇ ಇರುವುದರಿಂದ ಜನರು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಅನಗತ್ಯವಾಗಿ ಬಿಸಿಲಿನಲ್ಲಿ ಓಡಾಡದಿರುವುದು ಉತ್ತಮ. ಉಷ್ಣಾಘಾತದಿಂದ ರಕ್ಷಿಸಿಕೊಳ್ಳಲು ನಿಯಮಿತವಾಗಿ ನೀರು, ತಂಪು ಪಾನೀಯಗಳನ್ನು ಸೇವಿಸಬೇಕು. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್‌ವರೆಗೆ ಕಂಡು ಬರುತ್ತಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಇದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಕಂಡು ಬರುತ್ತಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.