2026-05-06 05:10:30

Tempo collision | ಟೆಂಪೋ ಡಿಕ್ಕಿ ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕ ಸ್ಥಳದಲ್ಲೇ ಸಾ*ವು | Speed News Kannada

Tempo collision | ಟೆಂಪೋ ಡಿಕ್ಕಿ ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕ ಸ್ಥಳದಲ್ಲೇ ಸಾ*ವು | Speed News Kannada

ಚಾಮರಾಜನಗರ: ಅತಿ ವೇಗವಾಗಿ ಬಂದ ಟೆಂಪೋವೊಂದು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ, 11 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹರಳೆ ಗ್ರಾಮದಲ್ಲಿ ನಡೆದಿದೆ. ಹರಳೆ ಗ್ರಾಮದ ನಿವಾಸಿ ಯಶವಂತ್ (11) ಮೃತಪಟ್ಟ ಬಾಲಕ. ಇಂದು ಮಧ್ಯಾಹ್ನ ಯಶವಂತ್ ಎಂದಿನಂತೆ ತನ್ನ ಸೈಕಲ್‌ನಲ್ಲಿ ರಸ್ತೆಯ ಬದಿಯಲ್ಲಿ ಹೋಗುತ್ತಿದ್ದಾಗ, ಎದುರಿನಿಂದ ಅತಿ ವೇಗವಾಗಿ ಬಂದ ಟೆಂಪೋ ನಿಯಂತ್ರಣ ತಪ್ಪಿ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಾಲಕ ಸೈಕಲ್ ಸಮೇತ ರಸ್ತೆಗೆ ಉರುಳಿ ಬಿದ್ದಿದ್ದಾನೆ. ತಲೆ ಹಾಗೂ ದೇಹದ ಇತರ ಭಾಗಗಳಿಗೆ ತೀವ್ರ ಸ್ವರೂಪದ ಪೆಟ್ಟಾಗಿದ್ದು, ಅತಿಯಾದ ರಕ್ತಸ್ರಾವದಿಂದಾಗಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಗ್ರಾಮಸ್ಥರು ಚಾಲಕನ ಬೇಜವಾಬ್ದಾರಿತನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹರಳೆ ಗ್ರಾಮದ ರಸ್ತೆಯಲ್ಲಿ ವಾಹನಗಳು ಮಿತಿಮೀರಿದ ವೇಗದಲ್ಲಿ ಸಂಚರಿಸುತ್ತಿರುವುದೇ ಇಂತಹ ಅವಘಡಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶವ್ಯಕ್ತಪಡಿಸಿದ್ದಾರೆ. ಮುದ್ದಾದ ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಕೊಳ್ಳೇಗಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಏಳು ವರ್ಷದ ಪ್ರೀತಿ, ಒಂದೂವರೆ ವರ್ಷದ ಸಂಸಾರ: ಗರ್ಭಿಣಿ ಪತ್ನಿಯನ್ನು ಬಿಟ್ಟು ಎರಡನೇ ಮದುವೆಗೆ ನಿಂತ ಪತಿ!
ತುಮಕೂರು: ಪ್ರೀತಿಸಿ ಮದುವೆಯಾದ ಪತಿಯೇ ಈಗ ಗರ್ಭಿಣಿ ಪತ್ನಿಯನ್ನು ದೂರ ತಳ್ಳಿ ಮತ್ತೊಂದು ಮದುವೆಗೆ ಸಿದ್ದನಾಗಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆಯ ಯುವತಿಯೊಬ್ಬಳು ತನಗೆ ನ್ಯಾಯ ಬೇಕು ಎಂದು ಆಗ್ರಹಿಸಿ ಈಗ ಪೊಲೀಸರ ಮೊರೆ ಹೋಗಿದ್ದಾಳೆ. ಸಂತ್ರಸ್ತ ಯುವತಿಯು ಏಳು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದಾಗ ಪ್ಯಾನ್ ಕಾರ್ಡ್ ಮಾಡಿಸಲು ಜೆರಾಕ್ಸ್ ಶಾಪ್‌ಗೆ ಹೋಗಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಬೊಮ್ಮಾನಾಯಕ್ ಎಂಬಾತನ ಪರಿಚಯವಾಗಿತ್ತು. ಈ ಸ್ನೇಹ ಕಾಲಕ್ರಮೇಣ ಪ್ರೀತಿಗೆ ತಿರುಗಿದ್ದು, ಸುಮಾರು ಏಳು ವರ್ಷಗಳ ಕಾಲ ಇಬ್ಬರೂ ಪ್ರೀತಿಸಿದ್ದರು. ಇಬ್ಬರ ಮನೆಯಲ್ಲಿ ಮದುವೆಗೆ ವಿರೋಧವಿದ್ದರೂ ಸಹ, ಎಲ್ಲವನ್ನೂ ಮೀರಿ ಪಾವಗಡದ ದೇವಸ್ಥಾನವೊಂದರಲ್ಲಿ ಈ ಜೋಡಿ ಸಪ್ತಪದಿ ತುಳಿದಿತ್ತು. ಮದುವೆಯಾದ ನಂತರ ಒಂದೂವರೆ ವರ್ಷಗಳ ಕಾಲ ಈ ದಂಪತಿ ಸುಖ ಸಂಸಾರ ನಡೆಸಿದ್ದರು. ಆದರೆ ಯುವತಿ ಗರ್ಭಿಣಿಯಾದ ಬೆನ್ನಲ್ಲೇ ಬೊಮ್ಮಾನಾಯಕ್ ತನ್ನ ಪೋಷಕರ ಮಾತಿಗೆ ಮರುಳಾಗಿ ಪತ್ನಿಯನ್ನು ದೂರ ಮಾಡಲು ಶುರು ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ಬೊಮ್ಮಾನಾಯಕ್ ಕುಟುಂಬದವರು ಆತನಿಗೆ ಬೇರೊಂದು ಮದುವೆ ಮಾಡಲು ಸಕಲ ಸಿದ್ದತೆಗಳನ್ನು ನಡೆಸುತ್ತಿದ್ದಾರೆ ಎನ್ನಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.