2026-04-23 09:27:38

Tennis legend Leander Paes joins BJP|ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ|Speed News Kannada

Tennis legend Leander Paes joins BJP|ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ|Speed News Kannada

ಪಶ್ಚಿಮ ಬಂಗಾಳ ಚುನಾವಣಾ ಹೊತ್ತಲ್ಲೇ ಬಿಜೆಪಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ.. ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಪೇಸ್ ಬಿಜೆಪಿಗೆ ಸೇರಿದ್ದಾರೆ.

ಟೆನಿಸ್ ತಾರೆ ಲಿಯಾಂಡರ್ ಪೇಸ್ ಇತ್ತೀಚೆಗೆ ಕೋಲ್ಕತ್ತಾದಲ್ಲಿ ಬಿಜೆಪಿ ಮುಖ್ಯಸ್ಥ ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದರು, ಇದು ಅವರು ಪಕ್ಷ ಸೇರುವ ಬಗ್ಗೆ ಊಹಾಪೋಹಗಳಿಗೆ ಕಾರಣವಾಯಿತು.  ಲಿಯಾಂಡರ್‌ ಪೇಸ್‌ ಈ ಹಿಂದೆ 2021 ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು ಮತ್ತು 2022 ರಲ್ಲಿ ಗೋವಾ ಚುನಾವಣೆಯ ಸಮಯದಲ್ಲಿ ಪಕ್ಷಕ್ಕಾಗಿ ಪ್ರಚಾರ ಮಾಡಿದ್ದರು. ಆದರೆ ಅವರು ಚುನಾವಣೆಯಲ್ಲಿ ಸ್ಪರ್ಧಿಸರಲಿಲ್ಲ.

ಪೇಸ್ ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಮಾತನಾಡಿ, ಬಿಜೆಪಿ ಕುಟುಂಬಕ್ಕೆ ಲಿಯಾಂಡರ್ ಪೇಸ್ ಅವರ ಇಂದಿನ ಪ್ರವೇಶ ಐತಿಹಾಸಿಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕಳೆದ 12 ವರ್ಷಗಳಿಂದ ಕ್ರೀಡೆ ಮತ್ತು ಕ್ರೀಡಾಪಟುಗಳನ್ನು ಪ್ರತಿಪಾದಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.