ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದರ ಪರಿಣಾಮ ಬಸ್‌ನಲ್ಲಿದ್ದ 10 ಪ್ರಯಾಣಿಕರು ಸುಟ್ಟುಕರಕಲಾಗಿದ್ದಾರೆ. ಹೈದರಾಬಾದ್‌ನಿಂದ ಪಾಮುರು ಕಡೆಗೆ ಸಂಚರಿಸುತ್ತಿದ್ದ ಬಸ್ ಪಲಕಲಾ ಕ್ವಾರಿಗಳ ಬಳಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಹಿಂಭಾಗ ಕುಳಿತಿದ್ದ ಹಲವರು ಸಾವನ್ನಪ್ಪಿದ್ದು. ಇನ್ನೂ ಹಲವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿವೆ. ಗಾಯಾಳುಗಳನ್ನು ಮಾರ್ಕಪುರಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.