2026-04-23 07:40:03

Terrible bus accident in Andhra Pradesh, 10 people burnt to death | ಆಂಧ್ರಪ್ರದೇಶದಲ್ಲಿ ಭೀಕರ ಬಸ್‌ ಅಪಘಾತ, 10 ಮಂದಿ ಸುಟ್ಟು ಕರಕಲು | Speed news kannada

Terrible bus accident in Andhra Pradesh, 10 people burnt to death | ಆಂಧ್ರಪ್ರದೇಶದಲ್ಲಿ ಭೀಕರ ಬಸ್‌ ಅಪಘಾತ, 10 ಮಂದಿ ಸುಟ್ಟು ಕರಕಲು | Speed news kannada

ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದರ ಪರಿಣಾಮ ಬಸ್‌ನಲ್ಲಿದ್ದ 10 ಪ್ರಯಾಣಿಕರು ಸುಟ್ಟುಕರಕಲಾಗಿದ್ದಾರೆ. ಹೈದರಾಬಾದ್‌ನಿಂದ ಪಾಮುರು ಕಡೆಗೆ ಸಂಚರಿಸುತ್ತಿದ್ದ ಬಸ್ ಪಲಕಲಾ ಕ್ವಾರಿಗಳ ಬಳಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ.  ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ  ಹಿಂಭಾಗ ಕುಳಿತಿದ್ದ ಹಲವರು ಸಾವನ್ನಪ್ಪಿದ್ದು. ಇನ್ನೂ ಹಲವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ತೀವ್ರತೆಗೆ ಬಸ್‌ ಹಾಗೂ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿವೆ. ಗಾಯಾಳುಗಳನ್ನು ಮಾರ್ಕಪುರಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.