2026-06-08 01:30:46

Terrorist Amir Hamza shot dead in Pakistan | ಪಾಕಿಸ್ತಾನದಲ್ಲಿ ಉಗ್ರ ಅಮೀರ್ ಹಮ್ಜಾ ಮೇಲೆ ಗುಂಡಿನ ದಾಳಿ | Speed news kannada

Terrorist Amir Hamza shot dead in Pakistan | ಪಾಕಿಸ್ತಾನದಲ್ಲಿ ಉಗ್ರ ಅಮೀರ್ ಹಮ್ಜಾ ಮೇಲೆ ಗುಂಡಿನ ದಾಳಿ | Speed news kannada

ಲಾಹೋರ್‌ನಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಗುಂಡಿನ ದಾಳಿ ನಡೆದಿದೆ. ಲಷ್ಕರ್-ಎ-ತೊಯ್ಬಾ ಸಂಘಟನೆಯ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಅಜ್ಞಾತ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ.ನಗರದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಹಮ್ಜಾ ಮೇಲೆ ಹೊಂಚು ಹಾಕಿದ್ದ ದುಷ್ಕರ್ಮಿಗಳು ಹಠಾತ್ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ಹಮ್ಜಾನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಉಗ್ರ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಮ್ಜಾ, ಲಷ್ಕರ್-ತೈಬಾ ಸಂಘಟನೆಯ ಪ್ರಮುಖ ಸೈದ್ಧಾಂತಿಕ ಮುಖವಾಗಿದ್ದರು.ಹಫೀಜ್ ಸಯೀದ್ ನಂತರ ಸಂಘಟನೆಯಲ್ಲಿ ಅತ್ಯಂತ ಪ್ರಭಾವಿ ನಾಯಕನಾಗಿ ಪರಿಗಣಿಸಲಾಗುತ್ತಿತ್ತು. ಹಮ್ಜಾ ತನ್ನ ಉಗ್ರ ಭಾಷಣಗಳು ಹಾಗೂ ಲೇಖನಗಳ ಮೂಲಕ ಯುವಕರನ್ನು ಪ್ರೇರೇಪಿಸುತ್ತಿದ್ದನು. ಈತನಿಗೆ ಅಮೆರಿಕ ಸರ್ಕಾರ ‘ಜಾಗತಿಕ ಭಯೋತ್ಪಾದಕ’ ಎಂಬ ಪಟ್ಟಿಯನ್ನೂ ನೀಡಿತ್ತು.ಇತ್ತೀಚಿನ ತಿಂಗಳುಗಳಲ್ಲಿ ಪಾಕಿಸ್ತಾನದಲ್ಲಿ ಮೋಸ್ಟ್ ವಾಂಟೆಡ್ ಉಗ್ರರ ಮೇಲೆ ಸರಣಿ ದಾಳಿಗಳು ನಡೆಯುತ್ತಿರುವುದು ಗಮನಾರ್ಹ. ಈ ದಾಳಿಯೂ ಸೂಕ್ಷ್ಮವಾಗಿ ಯೋಜಿತವಾಗಿದ್ದು,ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ಗೂ ಆತಂಕ ಉಂಟುಮಾಡಿದೆ ಎನ್ನಲಾಗಿದೆ.

ಘಟನೆಯ ನಂತರ ಲಾಹೋರ್‌ನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದರೂ, ದಾಳಿಕೋರರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹಮ್ಜಾ ಬದುಕುಳಿಯುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದ್ದು, ಇದು ಲಷ್ಕರ್ ಸಂಘಟನೆಗೆ ದೊಡ್ಡ ಹೊಡೆತವೆಂದು ವಿಶ್ಲೇಷಿಸಲಾಗುತ್ತಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.