2026-06-08 01:23:47

Terrorist attack threat at Red Fort | ಕೆಂಪುಕೋಟೆಗೆ ಉಗ್ರರ ದಾಳಿ ಭೀತಿ ದೆಹಲಿಯಲ್ಲಿ ಹೈ ಅಲರ್ಟ್‌ ಬಿಗಿ ಭದ್ರತೆ | Speed News Kannada

Terrorist attack threat at Red Fort | ಕೆಂಪುಕೋಟೆಗೆ ಉಗ್ರರ ದಾಳಿ ಭೀತಿ ದೆಹಲಿಯಲ್ಲಿ ಹೈ ಅಲರ್ಟ್‌ ಬಿಗಿ ಭದ್ರತೆ | Speed News Kannada

ನವದೆದಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಬಳಿ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಂಪುಕೋಟೆ ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಬಿಗಿಭದ್ರತೆ ಒದಗಿಸಲಾಗಿದೆ. 
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್‌–ಎ–ತಯಬಾ (ಎಲ್‌ಇಟಿ), ಕೆಂಪು ಕೋಟೆಯ ಸುತ್ತಮುತ್ತಲಿನ ಪ್ರದೇಶಗಳು ಮತ್ತು ಚಾಂದನಿ ಚೌಕ್‌ ನ ಕೆಲವು ಭಾಗಗಳು ಸೇರಿದಂತೆ ಪ್ರಮುಖ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆಗಳಿವೆ ಎಂಬ ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.
ಸುಧಾರಿತ ಸ್ಫೋಟಕ (ಐಇಡಿ) ದಾಳಿ ನಡೆಸಲು ಎಲ್‌ಇಟಿ ಸಂಚು ರೂಪಿಸುತ್ತಿದೆ. ಚಾಂದನಿ ಚೌಕ್ ಪ್ರದೇಶದಲ್ಲಿರುವ ದೇವಾಲಯವು ಸಂಭಾವ್ಯ ಗುರಿಯಾಗಿರಲೂಬಹುದು ಎಂದೂ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. ಫೆ.6ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಸ್ಫೋಟಕ್ಕೆ ಪ್ರತೀಕಾರವಾಗಿ, ಭಾರತದಲ್ಲಿ ಭಾರಿ ದಾಳಿ ನಡೆಸಲು ಸಂಘಟನೆ (ಎಲ್‌ಇಟಿ) ಯೋಜಿಸುತ್ತಿದೆ. ದೇಶದ ಪ್ರಮುಖ ದೇವಾಲಯಗಳನ್ನು ಗುರಿಯಾಗಿಸಬಹುದು ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ. 2025ರ ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟಗೊಂಡು 12 ಜನ ಮೃತಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.