2026-04-23 09:36:17

Thalapathy Vijay film will be decided on the election results | ಚುನಾವಣೆ ಫಲಿತಾಂಶದ ಮೇಲೆ ದಳಪತಿ ವಿಜಯ್ ಸಿನಿಮಾ ಭವಿಷ್ಯ ನಿರ್ಧಾರ | Speed news kannada

Thalapathy Vijay film will be decided on the election results | ಚುನಾವಣೆ ಫಲಿತಾಂಶದ ಮೇಲೆ ದಳಪತಿ ವಿಜಯ್ ಸಿನಿಮಾ ಭವಿಷ್ಯ ನಿರ್ಧಾರ | Speed news kannada

ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್‌ ದಳಪತಿಯ ಜನನಾಯಗನ್‌ ಚಿತ್ರಕ್ಕೆ ಎಲ್ಲಾ ಅಭಿಮಾನಿಗಳು ಕಾಯುತ್ತಿದ್ದಾರೆ. ಆದ್ರೆ ಕೆಲವು ವಿವಾದ ಹಾಗೂ ಚುನಾವಣೆ ಪ್ರಚಾರದಲ್ಲಿ ಆದ ಸಂಕಷ್ಟದಿಂದ ಜನನಾಯಗನ್‌ ಸಿನಿಮಾ ರಿಲೀಸ್‌  ಆಗೋದು ಸದ್ಯಕ್ಕಂತೂ ಅನುಮಾನವಾಗಿದೆ. ಸದ್ಯ  ಟಿವಿಕೆ ಪಕ್ಷದಲ್ಲಿ ಸ್ಪರ್ಧಿಸುತ್ತಿರುವ ವಿಜಯ್‌ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ವಿಜಯ್‌ ಅವರು ರಾಜಕೀಯಕ್ಕೆ ಕಾಲಿಡಬೇಕು ಎಂದು ನಿರ್ಧರಿಸಿಯಾಗಿದೆ. ಅವರ ಪಕ್ಷ ತಮಿಳುನಾಡಿನಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವ ಗುರಿ ಹೊಂದಿದ್ದಾರೆ. ದಳಪತಿ ವಿಜಯ್​​ಗೆ ರಾಜಕೀಯ ಹೊಸದು. ಆದ್ರೆ ಅವರು ತಮ್ಮ ಜನಪ್ರಿಯತೆ ಬಳಸಿ ಮೊದಲ ಚುನಾವಣೆಯಲ್ಲೇ ಗೆದ್ದೇ ಬಿಡುತ್ತಾರೆ ಎಂದು ಹೇಳೋದು ಕಷ್ಟವಾಗಿದೆ. ಸದ್ಯ ಚುನಾವಣೆ ಕಾರ್ಯದಲ್ಲಿ ಮುಳುಗಿರುವ ವಿಜಯ್‌ ಅವರ ಸಿನಿಮಾ ಬಿಡುಗಡೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ. ಅವರ ಸಿನಿಮಾ ಭವಿಷ್ಯವು ಈ ಚುನಾವಣಾ ಫಲಿತಾಂಶದ ಮೇಲೆ ನಿಂತಿದೆ. ವಿಜಯ್‌ರವರ ರಾಜಕೀಯ ಭವಿಷ್ಯ ಅತಂತ್ರವಾದರೆ ಅಟ್ಲಿ ಜೊತೆ ವಿಜಯ್ ಸಿನಿಮಾ ಮಾಡುವ ಸಾಧ್ಯತೆ ಇದೆಯಂತೆ. ರಾಜಕೀಯದಲ್ಲಿ ಯಶಸ್ಸು ಸಿಗದೆ ಇದ್ದರೆ ಅಕ್ಟೋಬರ್​ ಅಲ್ಲಿ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.