2026-06-08 01:26:55

The battle between Kiccha, the producers has reached the court|ಕೋರ್ಟ್‌ ಮೆಟ್ಟಿಲೇರಿದ ಕಿಚ್ಚ, ನಿರ್ಮಾಪಕರ ಸಮರ|Speed News Kannada

The battle between Kiccha, the producers has reached the court|ಕೋರ್ಟ್‌ ಮೆಟ್ಟಿಲೇರಿದ ಕಿಚ್ಚ, ನಿರ್ಮಾಪಕರ ಸಮರ|Speed News Kannada

ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸದ್ದು ಮಾಡುತ್ತಿರುವ ಹಳೆಯ ವಿವಾದ. ನಟ ಸುದೀಪ್‌ ಮತ್ತು ನಿರ್ಮಾಪಕ N.ಕುಮಾರ್‌ ನಡುವಿನ ಕೇಸ್ ಹೊಸ ತಿರುವು ಪಡೆದುಕೊಂಡಿದೆ.2023ರಲ್ಲಿ ಆರಂಭವಾದ ಈ ವಿವಾದದ ಸಂಬಂಧ, ನಟ ಸುದೀಪ್ ಇದೀಗ ಕೋರ್ಟ್‌ಗೆ ಹಾಜರಾಗಿದ್ದು, ಪ್ರಕರಣದ ವಿಚಾರಣೆ ಮುಂದುವರಿದಿದೆ. ನಿರ್ಮಾಪಕ M. N. ಸುರೇಶ್‌ ಹಾಗೂ ಸುದೀಪ್ ಕಾಲ್‌ಶೀಟ್ ನೀಡಲು 9 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪವನ್ನು ಸುದೀಪ್ ತಳ್ಳಿಹಾಕಿ, ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೇಳಿದ್ದರು.


ಇದಾದ ಬಳಿಕ ಸುದೀಪ್, ಇಬ್ಬರು ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕಳುಹಿಸಿ, 10 ದಿನಗಳಲ್ಲಿ ಬಹಿರಂಗ ಕ್ಷಮೆಯಾಚನೆ ಮತ್ತು 10 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿದ್ದರು. ಆದರೆ ಪ್ರತಿಕ್ರಿಯೆ ಸಿಗದ ಹಿನ್ನೆಲೆ, ಕ್ರಿಮಿನಲ್ ಮಾನನಷ್ಟ ದೂರು ದಾಖಲಿಸಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿ, ನಿನ್ನೆ ಸುದೀಪ್ 7ನೇ ಎಸಿಜೆಎಂ ಕೋರ್ಟ್‌ಗೆ ಹಾಜರಾಗಿದ್ದರು. ಮಧ್ಯಾಹ್ನ ಸುಮಾರು 3 ಗಂಟೆಗೆ ನಡೆದ ವಿಚಾರಣೆಯಲ್ಲಿ, ನಿರ್ಮಾಪಕರ ಪರ ವಕೀಲರಿಂದ ಕ್ರಾಸ್ ಎಕ್ಸಾಮಿನೇಷನ್ ನಡೆಯಿತು.ಪ್ರಕರಣದ ಮುಂದಿನ ವಿಚಾರಣೆಯನ್ನು ಕೋರ್ಟ್ ಜೂನ್ 6ಕ್ಕೆ ಮುಂದೂಡಿದೆ.ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಕಣ್ಣು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.