ಮದ್ಯ ಮಾರಟ ಅಕ್ರಮಗಳನ್ನು ತಡೆಯಬೇಕಿದ್ದ ಅಧಿಕಾರಿಗಳೇ ಅಕ್ರಮ ಮದ್ಯ ಮಾರಟ ಮಾಡುತ್ತಿರುವ ಘಟನೆ ದಕ್ಷಿಣ ಬೆಂಗಳೂರಿನ ರಾಮನಗರದಲ್ಲಿ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಪಾನೀಯ ನಿಗಮದ ಅಧಿಕಾರಿಗಳು ಹಣದಾಸೆಗೆ ಅವಧಿ ಮೀರಿದ ಮದ್ಯ ಮಾರಾಟ ನಡೆಯುತ್ತಿದ್ದು, ಐಜೂರು ಠಾಣೆ ಪೊಲೀಸರ ಕಾರ್ಯಚರಣೆ ವೇಳೆ ಗೊತ್ತಾಗಿದೆ. ಅವಧಿಗೆ ಮೀರಿದ ಮದ್ಯಗಳು ನಿಗಮದ ಸೂಪರ್ ವೈಸರ್ ಮನೆಯಲ್ಲಿ ಪತ್ತೆಯಾಗಿದೆ. ಹಲವೆಡೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಅವಧಿಮೀರಿದ ಮದ್ಯವನ್ನು ನಾಶಪಡಿಸುವ ಬದಲು ಕರ್ನಾಟಕ ಪಾನೀಯ ನಿಗಮದ ಗೋದಾಮಿನಿಂದ ಅವನ್ನು ತಂದು ಮನೆಯಲ್ಲಿ ಸಂಗ್ರಹ ಮಾಡಲಾಗಿತ್ತು. ಇವನ್ನು ಗ್ರಾಮೀಣ ಭಾಗದಲ್ಲಿ ಮಾರಲು ಪ್ಲ್ಯಾನ್ ನಡೆದಿತ್ತು ಎನ್ನಲಾಗಿದೆ. ನಿವಾಸದಲ್ಲಿ ಸುಮಾರು ವಿವಿಧ ಕಂಪನಿಗಳ 20 ಬಾಕ್ಸ್ ಮದ್ಯ ಕಂಡುಬಂದಿದ್ದು, ಇವೆಲ್ಲವೂ ಮೂರ್ನಾಲ್ಕು ತಿಂಗಳು ಅವಧಿ ಮೀರಿದ ಮದ್ಯಗಳಾಗಿವೆ. ಹಣದಾಸೆಗೆ ಕಳೆದ ಹಲವು ವರ್ಷಗಳಿಂದ ಅಕ್ರಮ ದಂಧೆ ನಡೆಯುತ್ತಿದ್ದು, ಐಜೂರು ಪೊಲೀಸರಿಂದ ಸೂಪರ್ ವೈಸರ್ ಸುರೇಶ್(52) ಬಂಧಿಸಲಾಗಿದೆ. ಬಳಿಕ ಸ್ಟೇಷನ್ ಬೇಲ್ ನೀಡಿ ಆರೋಪಿಯನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ