2026-04-23 09:27:48

The sale of expired liquor is being carried out under the leadership of officials | ಅಧಿಕಾರಿಗಳ ನೇತೃತ್ವದಲ್ಲೇ ನಡೀತಿದೆ ಅವಧಿ ಮೀರಿದ ಮದ್ಯ ಮಾರಾಟ | Speed news kannada

 The sale of expired liquor is being carried out under the leadership of officials | ಅಧಿಕಾರಿಗಳ ನೇತೃತ್ವದಲ್ಲೇ ನಡೀತಿದೆ ಅವಧಿ ಮೀರಿದ ಮದ್ಯ ಮಾರಾಟ | Speed news kannada

ಮದ್ಯ ಮಾರಟ ಅಕ್ರಮಗಳನ್ನು ತಡೆಯಬೇಕಿದ್ದ ಅಧಿಕಾರಿಗಳೇ ಅಕ್ರಮ ಮದ್ಯ ಮಾರಟ ಮಾಡುತ್ತಿರುವ ಘಟನೆ ದಕ್ಷಿಣ ಬೆಂಗಳೂರಿನ ರಾಮನಗರದಲ್ಲಿ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಪಾನೀಯ ನಿಗಮದ ಅಧಿಕಾರಿಗಳು  ಹಣದಾಸೆಗೆ ಅವಧಿ ಮೀರಿದ ಮದ್ಯ ಮಾರಾಟ ನಡೆಯುತ್ತಿದ್ದು, ಐಜೂರು ಠಾಣೆ ಪೊಲೀಸರ ಕಾರ್ಯಚರಣೆ ವೇಳೆ ಗೊತ್ತಾಗಿದೆ. ಅವಧಿಗೆ ಮೀರಿದ ಮದ್ಯಗಳು ನಿಗಮದ ಸೂಪರ್ ವೈಸರ್ ಮನೆಯಲ್ಲಿ ಪತ್ತೆಯಾಗಿದೆ. ಹಲವೆಡೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಅವಧಿಮೀರಿದ ಮದ್ಯವನ್ನು ನಾಶಪಡಿಸುವ ಬದಲು ಕರ್ನಾಟಕ ಪಾನೀಯ ನಿಗಮದ ಗೋದಾಮಿನಿಂದ ಅವನ್ನು ತಂದು ಮನೆಯಲ್ಲಿ ಸಂಗ್ರಹ ಮಾಡಲಾಗಿತ್ತು. ಇವನ್ನು ಗ್ರಾಮೀಣ ಭಾಗದಲ್ಲಿ ಮಾರಲು ಪ್ಲ್ಯಾನ್ ನಡೆದಿತ್ತು ಎನ್ನಲಾಗಿದೆ. ನಿವಾಸದಲ್ಲಿ ಸುಮಾರು ವಿವಿಧ ಕಂಪನಿಗಳ 20 ಬಾಕ್ಸ್​ ಮದ್ಯ ಕಂಡುಬಂದಿದ್ದು, ಇವೆಲ್ಲವೂ ಮೂರ್ನಾಲ್ಕು ತಿಂಗಳು ಅವಧಿ ಮೀರಿದ ಮದ್ಯಗಳಾಗಿವೆ. ಹಣದಾಸೆಗೆ ಕಳೆದ ಹಲವು ವರ್ಷಗಳಿಂದ ಅಕ್ರಮ ದಂಧೆ ನಡೆಯುತ್ತಿದ್ದು, ಐಜೂರು ಪೊಲೀಸರಿಂದ ಸೂಪರ್ ವೈಸರ್​ ಸುರೇಶ್(52) ಬಂಧಿಸಲಾಗಿದೆ. ಬಳಿಕ ಸ್ಟೇಷನ್ ಬೇಲ್ ನೀಡಿ ಆರೋಪಿಯನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.