2026-06-08 04:10:35

The wicked son who threw his father out of the car | ತಂದೆಯನ್ನು ಕಾರಿನಿಂದ ಹೊರದಬ್ಬಿ ನಡುರಸ್ತೆಯಲ್ಲೇ ಬಿಟ್ಟು ಹೋದ ಪಾಪಿ ಮಗ | Speed News Kannada

The wicked son who threw his father out of the car | ತಂದೆಯನ್ನು ಕಾರಿನಿಂದ ಹೊರದಬ್ಬಿ ನಡುರಸ್ತೆಯಲ್ಲೇ ಬಿಟ್ಟು ಹೋದ ಪಾಪಿ ಮಗ | Speed News Kannada

ಚಲಿಸುತ್ತಿದ್ದ ಕಾರಿನಲ್ಲಿದ್ದ ತನ್ನ ತಂದೆಯನ್ನು ಯುವಕನೊಬ್ಬ ಕಾರಿನಿಂದ ಹೊರಗೆ ದಬ್ಬಿ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಲ್ಲದೇ ನಡು ರಸ್ತೆಯಲ್ಲೇ ಬಿಟ್ಟು ಹೋದ ಶಾಕಿಂಗ್ ಘಟನೆಯೊಂದು ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮಗನ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಅನಾಮವೀಯ ಘಟನೆ ಎಲ್ಲಿ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ವ್ಯಕ್ತಿಯೊಬ್ಬ ತನ್ನ ತಂದೆಯೊಂದಿಗೆ ಯಾವುದೋ ವಾಗ್ವಾದ ನಡೆಸಿ, ಕೋಪದ ಭರದಲ್ಲಿ ಆತ ತಂದೆಯನ್ನು ತನ್ನ ಕಾರಿನಿಂದ ಇಳಿಸಿ, ಹಲ್ಲೆ ಮಾಡಿ, ಕಾಲಿನಿಂದ ಒದ್ದು ಅಲ್ಲಿಯೇ ಬಿಟ್ಟು ಹೋಗಿದ್ದಾನೆ. ಇದರ ವಿಡಿಯೋವನ್ನು ಅದೇ ದಾರಿಯಲ್ಲಿ ಪ್ರಯಾಣಿಸುತ್ತಿದ್ದವರೊಬ್ಬರು ಸೆರೆಹಿಡಿದಿದ್ದಾರೆ. ಮಗ ಸ್ಥಳದಿಂದ ತೆರಳಿದ ಬಳಿಕ ವೃದ್ಧ ವ್ಯಕ್ತಿಗೆ ಸಹಾಯ ಮಾಡಲು ಸ್ಥಳೀಯರು ದಾವಿಸಿದ್ದಾರೆ. ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಅದೃಷ್ಟವಶಾತ್ ಹಲ್ಲೆಗೊಳಗಾದ ವ್ಯಕ್ತಿಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಎನ್ನಲಾಗಿದೆ. ಇನ್ನು ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕರು ಈ ಕೃತ್ಯವನ್ನು ಖಂಡಿಸಿದ್ದಾರೆ, ಇದನ್ನು ಅಮಾನವೀಯ ಎಂದು ಕರೆದಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.