2026-06-25 02:08:38

Thieves steal gold from Tumkur temple | ತುಮಕೂರು ದೇವಸ್ಥಾನದಲ್ಲಿ ಕಳ್ಳರ ಕೈಚಳಕ ಚಿನ್ನಾಭರಣ ದರೋಡೆ | Speed News Kannada

Thieves steal gold from Tumkur temple | ತುಮಕೂರು ದೇವಸ್ಥಾನದಲ್ಲಿ ಕಳ್ಳರ ಕೈಚಳಕ ಚಿನ್ನಾಭರಣ ದರೋಡೆ | Speed News Kannada

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ವೀರನಾಗಮ್ಮ ದೇವಸ್ಥಾನದಲ್ಲಿ ಭಾರಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ನಡೆದ ಈ ಕೃತ್ಯದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಮತ್ತು ಸುಮಾರು 20 ಕೆಜಿ ಬೆಳ್ಳಿಯನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ. ರಾತ್ರಿ ಸುಮಾರು 1 ಗಂಟೆ ವೇಳೆಯಲ್ಲಿ ಕಳ್ಳರು ದೇವಸ್ಥಾನದ ವಿದ್ಯುತ್ ಸಂಪರ್ಕವನ್ನು ಮೊದಲು ಕಡಿತಗೊಳಿಸಿ ಬಳಿಕ ಗ್ಯಾಸ್ ಕಟರ್ ಬಳಸಿ ಬಾಗಿಲು ಮುರಿದು ಒಳನುಗ್ಗಿದ್ದಾರೆ. ನಂತರ ದೇವರ ತಾಳಿ, ಕಣ್ಣಿನ ಕವಚ, ಮೂಗುತಿ ಸೇರಿದಂತೆ ಹಲವು ಚಿನ್ನಾಭರಣಗಳನ್ನು ಕಳವು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಳ್ಳತನದ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ತುಮಕೂರು ಜಿಲ್ಲೆಯ ಎಎಸ್‌ಪಿ ಪುರುಷೋತ್ತಮ ಭೇಟಿ ನೀಡಿ ದೇವಸ್ಥಾನದ ಸುತ್ತಾ ಮುತ್ತಾ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಆರಂಭಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.