2026-07-23 08:27:10

this is siddaramaiah brothers budget bjp Speed News Kannada

this is siddaramaiah brothers budget bjp Speed News Kannada

ಬೆಂಗಳೂರು: ಅಲ್ಪಸಂಖ್ಯಾತರ ಏಳಿಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆ. ಇವರಿಗಾಗಿ ರಾಜ್ಯದ ಬೊಕ್ಕಸದ ಬಹುಪಾಲನ್ನೇ ಮೀಸಲಿಟ್ಟಿರುವುದು ನಾಡಿನ ದೌರ್ಭಾಗ್ಯ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಇದು ಬ್ರದರ್ಸ್‌ ಬಜೆಟ್‌ ಎಂದು ಪೋಸ್ಟರ್‌ ವೊಂದನ್ನು ಬಿಡುಗಡೆ ಮಾಡಿದೆ.

ಅಲ್ಪಸಂಖ್ಯಾತರ ಶಾಲೆಗಳನ್ನು ಕೆಪಿಎಸ್‌ ಮಾದರಿಯಲ್ಲಿ ಉನ್ನತೀಕರಣಕ್ಕೆ 1000 ಕೋಟಿ ರೂ. ಅಲ್ಪಸಂಖ್ಯಾತರ ವಸತಿ ಶಾಲೆಗಳ ಆರಂಭ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿ ಅಲ್ಪಸಂಖ್ಯಾತ ಕಾಲೋನಿಗಳ ಮೂಲಸೌಕರ್ಯಕ್ಕೆ ನೂರಾರು ಕೋಟಿ ಮೀಸಲಿಟ್ಟಿದೆ.

ಅಲ್ಪಸಂಖ್ಯಾಂತ ನಿರ್ಗತಿಕರಿಗೆ ಎರಡು ವೃದ್ಧಾಶ್ರಮ ಆರಂಭ  ಅಲ್ಪಸಂಖ್ಯಾಂತ ನಿರುದ್ಯೋಗಿಗಳಿಗೆ 3 ಲಕ್ಷ ರೂ. ವರೆಗೆ ಸಹಾಯಧನ ಅಲ್ಪಸಂಖ್ಯಾತ ಮಹಿಳೆಯರ ಸ್ವ-ಉದ್ಯೋಗ ಪ್ರೋತ್ಸಾಹಕ್ಕೆ ಸೊಸೈಟಿ ಸ್ಥಾಪನೆ ಹುಬ್ಬಳ್ಳಿ-ಕಲಬುರಗಿಯಲ್ಲಿ ಹಜ್‌ ಭವನ ನಿರ್ಮಾಣ ಅಲ್ಪಸಂಖ್ಯಾತ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿದೆ.

 ಅಲ್ಪಸಂಖ್ಯಾತ ಉದ್ಯೋಗಸ್ಥ ಮಹಿಳೆಯರಿಗೆ 4 ಹಾಸ್ಟೆಲ್ ಅಲ್ಪಸಂಖ್ಯಾತ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗೆ ₹50 ಸಾವಿರ ವಕ್ಫ್‌ ಆಸ್ತಿ ಅಭಿವೃದ್ಧಿಗೆ ಹಣ ಮೀಸಲು ಓಲೈಕೆ ರಾಜಕಾರಣವನ್ನೇ ಪರಮ ಗುರಿಯಾಗಿಸಿಕೊಂಡಿರುವ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸರ್ಕಾರ ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ರಾಜ್ಯದ ಬೊಕ್ಕಸದ ಬಹುಪಾಲನ್ನೇ ಮೀಸಲಿಟ್ಟಿರುವುದು ನಾಡಿನ ದೌರ್ಭಾಗ್ಯ ಎಂದು ಬಿಜೆಪಿ ಟೀಕಿಸಿದೆ.

 

 

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.