2026-06-08 01:25:59

This is why the movie Toxic is not releasing | ಈ ಕಾರಣಕ್ಕೆ ಟಾಕ್ಸಿಕ್ ಸಿನಿಮಾ ಮಾರ್ಚ್ 19ರಂದು ಬಿಡುಗಡೆಯಾಗುತ್ತಿಲ್ಲ | Speed News Kannada

This is why the movie Toxic is not releasing | ಈ ಕಾರಣಕ್ಕೆ ಟಾಕ್ಸಿಕ್ ಸಿನಿಮಾ ಮಾರ್ಚ್ 19ರಂದು ಬಿಡುಗಡೆಯಾಗುತ್ತಿಲ್ಲ | Speed News Kannada

ರಾಕಿಂಗ್ ಸ್ಟಾರ್ ಯಶ್‌ ನಟಿಸಿರುವ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದರು. ಆದರೆ ಟಾಕ್ಸಿಕ್‌ ಬಿಡುಗಡೆ ಮುಂದೂಡಲಾಗಿದೆ. ಚಿತ್ರತಂಡವೇ ಸಾಮಾಜಿಕ ಮಾಧ್ಯಮಗಳಲ್ಲಿಈ ಮಾಹಿತಿ ಹಂಚಿಕೊಂಡಿದ್ದು ಬಿಡುಗಡೆ ಮುಂದೂಡಲ್ಪಟ್ಟಿರುವುದನ್ನು ಖಚಿತಪಡಿಸಿದೆ.
ನಿರ್ದೇಶಕಿ ಗೀತು ಮೋಹನ್ದಾಸ್ ಅವರು ಸಿನಿಮಾ ಬಿಡುಗಡೆ ಮುಂದೂಡಲಾಗಿರುವ  ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾ ಮಾರ್ಚ್ 19ಕ್ಕೆ  ಬ‌ದಲಾಗಿ ಜೂನ್ 4ಕ್ಕೆರಂದು ಬಿಡುಗಡೆ ಆಗಲಿದೆ  ಎಂದು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಇರಾನ್–ಅಮೆರಿಕ, ಇಸ್ರೇಲ್ ಯುದ್ದವೇ ಟಾಕ್ಸಿಕ್ ಸಿನಿಮಾ ಬಿಡುಗಡೆಗೆ ಕಾರಣವಾಗಿದೆ. ಸಿನಿಮಾವನ್ನು ಏಕಕಾಲಕ್ಕೆ ಜಾಗತಿಕ ಮಟ್ಟದಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸಲಾಗಿತ್ತು. ಯುದ್ಧದ ಕಾರಣಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇರುವುದರಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಸಿದೆ. 
ಆದ್ದರಿಂದ, ನಮ್ಮ ಪಾಲುದಾರರು ಮತ್ತು ನಮ್ಮ ಪ್ರೇಕ್ಷಕರ ಹಿತದೃಷ್ಟಿಯಿಂದ, ನಮ್ಮ ಬಿಡುಗಡೆಯನ್ನು ಮರು ನಿಗದಿಪಡಿಸುವ ಕೆಲಸ ಎಚ್ಚರಿಕೆಯಿಂದ ಪರಿಗಣಿಸಿದ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ. ನಿಮ್ಮ ತಿಳುವಳಿಕೆ ಮತ್ತು ತಾಳ್ಮೆಗೆ ಧನ್ಯವಾದಗಳು ಮತ್ತು ನಿಮ್ಮ ನಿರಂತರ ಪ್ರೀತಿ ಮತ್ತು ಬೆಂಬಲ ಆಶೀರ್ವಾದ ನಮ್ಮ ಮೇಲೆ ಸದಾ ಇರಲಿ ಎಂದಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.