2026-06-03 11:44:51

ಹೊಸ ಸರ್ಕಾರ ಅಲ್ಲ, ಎಲ್ಲ ಯೋಜನೆಗಳೂ ಮುಂದುವರೆಯಲಿವೆ; ನಿಯೋಜಿತ ಡಿಸಿಎಂ ಪರಮೇಶ್ವರ್|Speed News Kannada

ಹೊಸ ಸರ್ಕಾರ ಅಲ್ಲ, ಎಲ್ಲ ಯೋಜನೆಗಳೂ ಮುಂದುವರೆಯಲಿವೆ; ನಿಯೋಜಿತ ಡಿಸಿಎಂ ಪರಮೇಶ್ವರ್|Speed News Kannada

ಬೆಂಗಳೂರು:  ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ. ಜಿ. ಪರಮೇಶ್ವರ್ ಅವರು, ತಮ್ಮನ್ನು ಈ ಮಹತ್ವದ ಹುದ್ದೆಗೆ ಆಯ್ಕೆ ಮಾಡಿದ ಪಕ್ಷದ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ. ವೇಣುಗೋಪಾಲ್ ಅವರಿಗೆ ಧನ್ಯವಾದಗಳನ್ನು ತಿಳಿಸುವುದಾಗಿ ಹೇಳಿದ್ದಾರೆ. ತನ್ನ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ನಂಬಿಕೆಗೆ ತಾನು ಆಭಾರಿಯಾಗಿರುವುದಾಗಿಯೂ ಅವರು ತಿಳಿಸಿದ್ದಾರೆ.

ಇದು ಹೊಸ ಸರ್ಕಾರವೇನಲ್ಲ. ಸರ್ಕಾರದ ಮುಂದುವರೆದ ಭಾಗ. ಮುಂದಿನ ಐದು ವರ್ಷಗಳಿಗೆ ಈಗಾಗಲೇ ಯೋಜನೆಗಳನ್ನು ರೂಪಿಸಿದ್ದೇವೆ. ಗ್ಯಾರಂಟಿ ಸೇರಿದಂತೆ ಎಲ್ಲ ಯೋಜನೆಗಳು ಮುಂದುವರೆಯಲಿವೆ ಎಂದು ಹೇಳಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.