2026-06-08 04:09:44

Thousands of fish slaughtered in Swarnarekha River|ಸ್ವರ್ಣರೇಖಾ ನದಿಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ|Speed News Kannada

Thousands of fish slaughtered in Swarnarekha River|ಸ್ವರ್ಣರೇಖಾ ನದಿಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ|Speed News Kannada

ಜಾರ್ಖಂಡ್‌ನ ಜೆಮ್ಶೆಡ್‌ಪುರದಲ್ಲಿ ಪರಿಸರ ಪ್ರೇಮಿಗಳನ್ನು ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಇಲ್ಲಿನ ಪ್ರಸಿದ್ಧ ಸ್ವರ್ಣರೇಖಾ ನದಿಯ ದಡದಲ್ಲಿ ಸಾವಿರಾರು ಮೀನುಗಳು ಮೃತಪಟ್ಟು ತೇಲುತ್ತಿರುವುದು ಕಂಡುಬಂದಿದೆ. ನದಿಯ ನೀರು ಸಂಪೂರ್ಣ ಕಲುಷಿತಗೊಂಡಿರುವುದೇ ಈ ಘೋರ ದುರಂತಕ್ಕೆ ಕಾರಣ.

ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಯ ಪ್ರಕಾರ, ನದಿ ನೀರಿನಲ್ಲಿ ಆಮ್ಲಜನಕದ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಇದೇ ವೇಳೆ ವಿಷಕಾರಿ ರಾಸಾಯನಿಕಗಳ ಪ್ರಮಾಣ ಮಿತಿ ಮೀರಿದೆ.ನಗರದ ವಿವಿಧ ಭಾಗಗಳ ಕೊಳಚೆ ನೀರು ಹಾಗೂ ಕೈಗಾರಿಕಾ ಘಟಕಗಳ ರಾಸಾಯನಿಕ ತ್ಯಾಜ್ಯವನ್ನು ಯಾವುದೇ ಸಂಸ್ಕರಣೆ ಮಾಡದೆ ನೇರವಾಗಿ ನದಿಗೆ ಬಿಡಲಾಗುತ್ತಿದೆ.

ನದಿ ಮಾಲಿನ್ಯದ ಬಗ್ಗೆ ಹಲವು ಬಾರಿ ದೂರು ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಇದೇ ಅಜಾಗರೂಕತೆಯಿಂದಾಗಿ ಇಂದು ಜಲಚರಗಳು ಬಲಿಯಾಗುತ್ತಿವೆ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಮಾಲಿನ್ಯದ ಮೂಲಗಳನ್ನು ಗುರುತಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ತಿಳಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.